New year ಸೆಲೆಬ್ರೇಷನ್‌ ಜೊತೆ ಜನರಿಗೂ ಜವಾಬ್ದಾರಿ ಇರಬೇಕು : ರಾಮಲಿಂಗಾರೆಡ್ಡಿ

ಬೆಂಗಳೂರು : ಹೊಸ ವರ್ಷವನ್ನು ಎಂಜಾಯ್‌ ಮಾಡುವುದರ ಜೊತೆಗೆ ಜನರಿಗೂ ಜವಾಬ್ದಾರಿ ಇರಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ಇದ್ದರೂ ಪೊಲೀಸರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಪೊಲೀಸರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಕಾಸಸೌಧದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪೊಲೀಸ್‌ ಬಂದೋಬಸ್ತ್ ಉತ್ತಮವಾಗಿದ್ದ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಕೆಲವರು ಹೆಚ್ಚಿಗೆ ಕುಡಿದ ಕಾರಣ ಅಂತಹವರ ಮೇಲೆ ಕ್ರಮ ಕೈಗೊಳ್ಳಬೇಕಾಯಿತು. ಕೆಲೆವೆಡೆ ಕುಡಿದ ಮಹಿಳೆಯರನ್ನ ಪೊಲೀಸರೇ ಮನೆಯವರಿಗೂ ಬಿಟ್ಟು ಬಂದಿದ್ದಾರೆ ಎಂದು ಪೊಲೀಸರ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಮಲಿಂಗಾರೆಡ್ಡಿ, ಕಾಲಚಕ್ರ ತಿರುಗುತ್ತದೆ. ಕೇಂದ್ರದಲ್ಲಿ ಈಗ ಬಿಜೆಪಿ ಸರ್ಕಾರ ರಚಿಸಿದೆ. ಆದರೆ ಮುಂದಿನ ದಿನಗಳಲ್ಲಿ ಅಧಿಕಾರ ಕಳೆದುಕೊಳ್ಳುವುದು ಸತ್ಯ. ಮುಂದಿನ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಮಹದಾಯಿ ಹೋರಾಟಗಾರರ ವಿರುದ್ಧ ಬಿಜೆಪಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಇಂತಹವರನ್ನು ಮುಂದಿನ ಚುನಾವಣೆಯಲ್ಲಿ ಜನ ಮನೆಯಲ್ಲೇ ಕೂರುವಂತೆ ಮಾಡುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com