ಹೊಸ ವರ್ಷದ ಮೊದಲ ದುರಂತ : ಕೇಕ್‌ cut ಮಾಡುವಾಗ ಕನ್ನಡದಲ್ಲಿ ಮಾತಾಡು ಅಂದಿದ್ದಕ್ಕೆ ಕೊಲೆ ?

ಬೆಂಗಳೂರು : ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಕೇಕ್‌ ಕತ್ತರಿಸುವ ವಿಚಾರ ಸಂಬಂಧ ಉಂಟಾದ ಜಗಳದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತಯೆ ಮಾಡಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಶಿವರಾಂ (25)ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಸ್ನೇಹಿತರ ಜೊತೆ ಹೊಸ ವರ್ಷ ಆಚರಣೆ ಮಾಡಿ ಬಳಿಕ ಕೇಕ್‌ ಕಟ್‌ ಮಾಡುವಾಗ ಗಲಾಟೆ ನಡೆದಿದೆ. ಕೊಲೆ ಮಾಡಿದ ದುಷ್ಕರ್ಮಿಗಳು ತಮಿಳಿನಲ್ಲಿ ಶುಭಾಷಯ ತಿಳಿಸಿದ್ದಾರೆ. ಈ ವೇಳೆ ಶಿವರಾಂ ಕನ್ನಡದಲ್ಲಿ ಮಾತಾಡುವಂತೆ ಹೇಳಿದ್ದಕ್ಕೆ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, 7 ಮಂದಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com