ಮಾನವ ಹಕ್ಕಗಳ ಆಯೋಗಕ್ಕೆ ಕೊನೆಗೂ ಅಧ್ಯಕ್ಷರ ನೇಮಕ ಮಾಡಿದ ಸರ್ಕಾರ

ಬೆಂಗಳೂರು : ಕಳೆದ ಐದು ವರ್ಷಗಳಿಂದ ಖಾಯಂ ಅಧ್ಯಕ್ಷರಿಲ್ಲದೆ ಕೆಲಸ ನಿರ್ವಹಿಸುತ್ತಿದ್ದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಕೊನೆಗೂ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ರಾಜ್ಯ ಮಾನವ ಹಕ್ಕುಗಳ ನೂತನ ಅಧ್ಯಕ್ಷರಾಗಿ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ಎಚ್‌ ವಘೇಲಾ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ.
ಈವಿಚಾರವಾಗಿ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷ್ತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ, ಗೃಹ ಸಚಿವ ರಾಮಲಿಂಗಾರೆಡ್ಡಿ, ವಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಸೇರಿದಂತೆ ಅನೇಕ ಗಣ್ಯರಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕಳೆದ ಐದು ವರ್ಷಗಳಿಂದ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಮೀರಾ ಸಿ. ಸಕ್ಸೇನಾ ಕಾರ್ಯ ನಿರ್ವಹಿಸುತ್ತಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com