New Year ಪಾರ್ಟಿ ಮುಗ್ಸಿ ಬರುವಾಗ ಅಪಘಾತ : ಸ್ಥಳದಲ್ಲೇ ಮೂವರ ಸಾವು

ಬೆಳಗಾವಿ : ಚಿಕ್ಕೋಡಿ ತಾಲ್ಲೂಕಿನ ನಿಪ್ಪಾಣಿ ನಗರ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿರುವುದಾಗಿ ಮೂಲಗಳು ತಿಳಿಸಿವೆ.

ಹೊಸ ವರ್ಷಾಚರಣೆ ಮುಗಿಸಿ ಗೋವಾದಿಂದ ವಾಪಸ್ಸಾಗುವ ವೇಳೆ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು ಸಾವಿತ್ರಿ ಗುಪ್ತಾ, ಶೋಭಾ ಗುಪ್ತಾ ಹಾಗೂ ಆರತಿ ಗುಪ್ತಾ ಎಂದು ಗುರುತಿಸಲಾಗಿದೆ. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಮುಂಬೈ ಮೂಲದವರೆಂದು ತಿಳಿದುಬಂದಿದೆ.

ಅಪಘಾತ ಸ್ಥಳಕ್ಕೆ ನಿಪ್ಪಾಣಿ ಶಹರ ಪಿಎಸ್‌ಐ ಶಶಿಕಾಂತ್‌ ವರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿಪ್ಪಾಣಿ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com