ಮಹದಾಯಿ ವಿವಾದ : ಲೋಕಸಭೆಯಲ್ಲಿ ದನಿ ಎತ್ತಿದ ಕಾಂಗ್ರೆಸ್‌ ಸಂಸದ ಮುದ್ದಹನುಮೇಗೌಡ

ದೆಹಲಿ : ಮಹದಾಯಿ ಹಾಗೂ ಮೇಕೆದಾಟು ವಿಚಾರ ಕುರಿತಂತೆ ಲೋಕಸಭಾ ಕಲಾಪದಲ್ಲಿಂದು ಕಾಂಗ್ರೆಸ್‌ ಸಂಸದ ಮುದ್ದಹನುಮೇಗೌಡ ಚರ್ಚಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ಜನರಿಗೆ ಕುಡಿಯುವ ನೀರು ಪೂರೈಕೆ ಮಾಡುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿ. ಕುಡಿಯುವ ನೀರಿಗಾಗಿ ಉತ್ತರ ಕರ್ನಾಟಕದ ಜನ ಪ್ರತಿಭಟನೆ ಮಾಡುತ್ತಿದ್ದಾರೆ. ಮಹದಾಯಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಮುದ್ದಹನುಮೇಗೌಡರು ಮನವಿ ಮಾಡಿದ್ದಾರೆ.
ಇನ್ನು ದಕ್ಷಿಣ ಕರ್ನಾಟಕದಲ್ಲಿ ಮೇಕೆದಾಟು ಯೋಜನೆಯನ್ನು ಜಾರಿ ಮಾಡುವುದು ಅಗತ್ಯವಾಗಿದ್ದು, ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯ ಬಿಟ್ಟು ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com