ಧಾರವಾಡ : ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಸುರೇಶ್ ಜಾಡರ್ ಸಾವು

ಧಾರವಾಡ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಸುರೇಶ್ ಜಾಡರ್ ಮೃತಪಟ್ಟಿದ್ದಾರೆ. ಸಂಯುಕ್ತ ಕರ್ನಾಟಕದಲ್ಲಿ ಉದ್ಯೋಗಿಯಾಗಿದ್ದ ಸುರೇಶ ಇಂದು ಬೆಳಿಗ್ಗೆ ಕಚೇರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬೈಕ್ ಮೇಲೆ ತೆರಳುತ್ತಿದ್ದಾಗ ಮತ್ತೊಂದು ಬೈಕ್ ಡಿಕ್ಕಿ ಸಂಭವಿಸಿದೆ.

ನಗರದ ಸಂಪಿಗೆ ನಗರ ಬಡಾವಣೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಸುರೇಶ್ ಗಂಭೀರವಾಗಿ ಗಾಯಗೊಂಡಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

11 ವರ್ಷಗಳ ಕಾಲ ಪ್ರಜಾವಾಣಿಯಲ್ಲಿ, 7 ವರ್ಷ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿಗಾರಾಗಿ ಬೆಂಗಳೂರು, ಹುಬ್ಬಳ್ಳಿ, ಬಾಗಲಕೋಟ, ಬಳ್ಳಾರಿ ಹಾಗೂ ಧಾರವಾಡದಲ್ಲಿ ಕೆಲಸ ಮಾಡಿದ್ದರು. ಕಳೆದ ಒಂದು ವರ್ಷದಿಂದ ವೆಬ್ ಪೋರ್ಟ್ ಲ್ ಗೆ ಧಾರವಾಡ ವರದಿಗಾರಾಗಿದ್ದರು. ಕೇವಲ ನಾಲ್ಕು ದಿನಗಳ ಹಿಂದೆಯಷ್ಟೆ ಸಂಯುಕ್ತ ಕರ್ನಾಟಕ ವರದಿಗಾರರಾಗಿ ಸೇರಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com