ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ BJP ಕಾರ್ಯಕರ್ತನ ಕೊಂದ ದುಷ್ಕರ್ಮಿಗಳು

ಮಂಗಳೂರು : ಹಾಡಹಗಲೇ ಮಂಗಳೂರು ಹೊರವಲಯದ ಕಾಟಿಪಳ್ಳಿ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತ ದೀಪಕ್‌  ರಾವ್‌ ಎಂಬುವವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸ್ವಿಫ್ಟ್‌ ಕಾರಿನಲ್ಲಿ ಬಂದ ದುಷ್ಕರ್ಮಿಗಳು ದೀಪಕ್‌ನನ್ನು  ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೀಪಕ್‌ ಸಿಮ್‌ ಕಾರ್ಡ್‌ ಡಿಸ್ಟ್ರಿಬ್ಯೂಟರ್‌ ಆಗಿ ಕೆಲಸ ಮಾಡುತ್ತಿದ್ದು, ಇಂದು ಕಾಟಿ ಪಾಳ್ಯದ ಮೊಬೈಲ್‌ ಅಂಗಡಿಗಳಿಗೆ ಸಿಮ್ ಕಾರ್ಡ್‌ ಡಿಸ್ಚ್ರಿಬ್ಯೂಟ್‌ ಮಾಡಲು ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆಕೋಪಿಗಳ ಪತ್ತೆಯಾಗಿ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.

ಇನ್ನು ದೀಪಕ್‌ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆ ಮತ್ತು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದು, ಎಜೆ ಆಸ್ಪತ್ರೆಗೆ ಮುತ್ತಿಗೆ ಹಾಕಿ ಕಮಿಷನರ್‌ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ.

ಇನ್ನು ಘಟನೆ ಕುರಿತಂತೆ ಸಂಸದ ನಳೀನ್‌ ಕುಮಾರ್‌ಕಟೀಲ್ ಪ್ರತಿಕ್ರಿಯಿಸಿದ್ದು, ಹಾಡಹಗಲೇ ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿದೆ. ಸರ್ಕಾರ ಇಂತಹವರ ವಿರುದ್ದ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಈ ಪ್ರಕರಣ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದಿದ್ದಾರೆ. ಜೊತೆಗೆ ದೀಪಕ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com