ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದಳೆಂದು ಈ ಪತಿ ಮಹಾಶಯ ಮಾಡಿದ್ದೇನು ?

ಲಖನೌ : ತ್ರಿವಳಿ ತಲಾಖ್‌ ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರಗೊಂಡು ಒಂದು ವಾರ ಕಳೆದಿದ್ದು, ಈ ಬೆನ್ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂಬ ಕಾರಣಕ್ಕೆ ಮುಸ್ಲಿಂ ಮಹಿಳೆಯೊಬ್ಬರಿಗೆ ತ್ರಿವಳಿ ತಲಾಖ್ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದಳು ಎಂಬ ಕಾರಣಕ್ಕೆ ಪತ್ನಿಗೆ ತ್ರಿವಳಿ ತಲಾಖ್‌ ಹೇಳುವ ಮೂಲಕ ಪತಿ ವಿಚ್ಛೇದನ ನೀಡಿದ್ದಾನೆ. ಈಗ ಎರಡನೇ ಮದುವೆಯಾಗಲು ಆತ ತಯಾರಾಗಿದ್ದು, ಈ ಬಗ್ಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ.

ಗುದಿಯಾ ಎಂಬಾಕೆಗೆ 2016ರಲ್ಲಿ ಅಖೀಲ್‌ ಅಹ್ಮದ್‌ ಎಂಬಾತನನ್ನು ಮದುವೆಯಾಗಿದ್ದಳು. ಮದುವೆಯಾದ ಕೆಲವೇ ದಿನಗಳಲ್ಲಿ 5 ಲಕ್ಷ ರೂ ವರದಕ್ಷಿಣೆ ತರುವಂತೆ ಪತಿ ಹಾಗು ಆತನ ಕುಟುಂಬಸ್ಥರು ಪೀಡಿಸುತ್ತಿದ್ದರು. ಕಳೆದ 1 ವರ್ಷದಿಂದ ನಿರಂತರವಾಗಿ ಪತಿ ಆಕೆಗೆ ಕಿರುಕುಳ ನೀಡುತ್ತಿದ್ದನು. ಈಗ ಗುದಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಕಾರಣಕ್ಕಾಗಿ ಆಕೆಗೆ ತ್ರಿವಳಿ ತಲಾಖ್ ನೀಡಿ ಮನೆಯಿಂದ ಹೊರದಬ್ಬಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com