ಆದಾಯಕ್ಕಿಂತ ಅಧಿಕ ವರಮಾನ : ರಾಜ್ಯದ ಹಲವು ಅಧಿಕಾರಿಗಳ ಮನೆ ಮೇಲೆ ACB ದಾಳಿ

ಬೆಂಗಳೂರು : ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ರಾಜ್ಯದ ಅನೇಕ ಕಡೆ ದಾಳಿ ನಡೆಸಿದ್ದಾರೆ. ನೆಲಮಂಗಲ ತಾಲ್ಲೂಕಿನ ವಾಜರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ರೇಖಾ ಅವರ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಗದಗ್‌ನ ನರಗುಂದದಲ್ಲಿನ ತಾಲ್ಲೂಕು ಪಂಚಾಯಿತಿ ಎಕ್ಸಿಕ್ಯೂಟಿವ್ಸ್‌ ಅಧಿಕಾರಿ ಅಶೋಕ್‌ ಪಾಟೀಲ್‌ ಅವರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ವರಮಾನ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಇನ್ನು ವಿಜಯಪುರದಲ್ಲೂ ನೀರಾವರಿ ಇಲಾಖೆ ಇಂಜಿನಿಯರಿಂಗ್‌ ವಿಭಾಗದ ಸೂಪರಿಂಟೆಂಡೆಂಟ್‌ ಸೋಮಪ್ಪ ಅವರ ಮನೆ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಅಂತೆಯೇ ರಾಯಚೂರಿನಲ್ಲಿ ಸ್ಯಾನಿಟರಿ ಇನ್ಸ್‌ಪೆಕ್ಟರ್‌ ಅಮರೇಶ್‌ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಅದೇ ರೀತಿ ದಾವಣಗೆರೆಯ ಬೆಸ್ಕಾಂ ಅಧಿಕಾರಿ ಜಗದೀಶಪ್ಪ ಅವರ ಮನೆ ಮೇಲೆ, ಹಾಸನದ ಸಕಲೇಶಪುರ ವಿಭಾಗದ ಎಇಇ ವೆಂಕಟೇಶ್‌ ಅವರ ಮನೆ ಮೇಲೂ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಪತ್ತೆಯಾಗಿರುವುದಾಗಿ ಹೇಳಲಾಗಿದೆ. ಮನೆಯಲ್ಲಿ ಅರ್ಧ ಕೆ.ಜಿಗೂ ಅಧಿಕ ಚಿನನ ಪತ್ತೆಯಾಗಿರುವುದಾಗಿ ಮೂಲಗಳು ಹೇಳಿವೆ.

ಇನ್ನು ಶಿರಸಿಯ ನೀರಾವರಿ ಇಂಜಿನಿಯರ್ ಎಇಇ ಬಾಲನ್‌ ಅವರ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published.