ಕೋಮುಗಲಭೆಗೆ ಹುಳಿ ಹಿಂಡುತ್ತಿರುವವರು ಈ BJP ಯವರೇ : CM

ಹಾಸನ : ಹಿಂದೂ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಿಎಂ ಸಿದ್ದರಾಮಯ್ಯ, ಈ ಘಟನೆ ನಡೆಯಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಮಾತನಾಡಿದ ಅವರು, ಜೀವ ಯಾರದೇ ಆಗಲಿ ಅದು ಅಮೂಲ್ಯವಾದುದು. ಘಟನೆ ಸಂಬಂಧ ಈಗಾಗಲೇ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಗಂಭೀರವಾದ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಬಿಜೆಪಿಯವರು ಚುನಾವಣೆ ಕಾರಣಕ್ಕೆ ರಾಜಕೀಯ ಮಾಡುತ್ತಿದ್ದಾರೆ. ಕೋಮುಗಲಭೆ ಸೇರಿದಂತೆ ಎಲ್ಲದಕ್ಕೂ ಹುಳಿ ಹಿಂಡುತ್ತಿರುವವರು ಬಿಜೆಪಿಯವರು ಎಂದು ತಿರುಗೇಟು ನೀಡಿದರು. ಘಟನೆ ಸಂಬಂದ ಗೃಹ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಬೇಕು ಎಂಬ ಬಿಜೆಪಿ ಆಗ್ರಹಕ್ಕೆ ತಿರುಗೇಟು ನೀಡಿದ ಸಿಎಂ, ಎಲ್ಲದಕ್ಕೂ ರಾಜೀನಾಮೆ ನೀಡಲು ಆಗುತ್ತಾ ಎಂದು ಪ್ರಶ್ನಿಸಿದರು.
ಹತ್ಯೆ ಬಗ್ಗೆ ತನಿಖೆ ನಡೆಯುತ್ತಿದ್ದು,  ಕೋಮುಗಲಭೆ ಹಿನ್ನೆಲೆಯಲ್ಲಿ ಕೃತ್ಯ ನಡೆದಿದ್ದರೆ ಸೂಕ್ತ ಪರಿಹಾರ ನೀಡಲಾಗುವುದು ಎಂದರು. ಮಹಾದಾಯಿ ವಿಚಾರದಲ್ಲಿ ಗೋವಾ ಸಿಎಂ ಪರಿಕರ್ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಾಟಕ ಆಡುತ್ತಿದ್ದಾರೆ ಎಂದು ದೂರಿದ ಸಿದ್ದರಾಮಯ್ಯ, ಅವರಿಗೆ ಕುಡಿಯುವ ನೀರು ಕೊಡುವ ಬದ್ಧತೆ ಇದ್ದರೆ ನ್ಯಾಯಾಧಿಕರಣದ ಮುಂದೆ ಇಷ್ಟು ನೀರು ಕೊಡುತ್ತೇವೆ ಎಂದು ಲಿಖಿತವಾಗಿ ಹೇಳಲಿ ಎಂದು ಆಗ್ರಹಿಸಿದರು.

Leave a Reply

Your email address will not be published.

Social Media Auto Publish Powered By : XYZScripts.com