Cricket : ಇಂಡೋ-ಆಫ್ರಿಕಾ ‘Freedom Series’ : ಇತಿಹಾಸ ರಚಿಸುವುದೇ ಕೊಹ್ಲಿ ಪಡೆ..?

ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡಗಳ ನಡುವೆ ಮೂರು ಟೆಸ್ಟ್ ಪಂದ್ಯಗಳ ‘ ಫ್ರೀಡಮ್ ಸರಣಿ ‘ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಶುಕ್ರವಾರ ಜನೆವರಿ 5 ರಿಂದ ಮೊದಲ ಟೆಸ್ಟ್ ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಅಂಗಳದಲ್ಲಿ ಆರಂಭಗೊಳ್ಳಲಿದೆ. ಪ್ರಸಕ್ತ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದು, ಫಾಫ್ ಡು ಪ್ಲೆಸಿಸ್ ನಾಯಕತ್ವದ ದ.ಆಫ್ರಿಕಾ ಎರಡನೇ ಸ್ಥಾನದಲ್ಲಿದೆ.

ಬಲಿಷ್ಟ ತಂಡಗಳ ನಡುವಿನ ಹಣಾಹಣಿ ಕ್ರಿಕೆಟ್ ಅಬಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಭಾರತ ಇದುವರೆಗೆ ಸೌತ್ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಜಯಿಸಲು ಸಾಧ್ಯವಾಗಿಲ್ಲ. ಭಾರತ, ದಕ್ಷಿಣ ಆಫ್ರಿಕಾ ನೆಲದಲ್ಲಿ ಆತಿಥೇಯರ ವಿರುದ್ಧ ಇಲ್ಲಿಯವರೆಗೆ  2 ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿದೆ.

Related image

2006-07 ರ ದ.ಆಫ್ರಿಕಾ ಸರಣಿಯಲ್ಲಿ ರಾಹುಲ್ ದ್ರಾವಿಡ್ ನೇತೃತ್ವದ ಭಾರತ, ಮೊದಲ ಸಲ ಟೆಸ್ಟ್ ಪಂದ್ಯವೊಂದನ್ನು ಗೆದ್ದಿತ್ತು. 2011 ರಲ್ಲಿ ನಡೆದಿದ್ದ ಟೆಸ್ಟ್ ಸರಣಿಯನ್ನು 1-1 ರಿಂದ ಡ್ರಾ ಮಾಡಿಕೊಳ್ಳುವಲ್ಲಿ ಧೋನಿ ನಾಯಕತ್ವದ ಟೀಮ್ ಇಂಡಿಯಾ ಸಫಲವಾಗಿತ್ತು. ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಜಯಿಸಿ, ಇತಿಹಾಸ ರಚಿಸುವ ಕನಸಿನೊಂದಿಗೆ ವಿರಾಟ್ ಕೊಹ್ಲಿ ಪಡೆ ಪ್ರೋಟೀಸ್ ನಾಡಿಗೆ ತೆರಳಿದೆ.

Image result for durban test 2010 win

ಉಭಯ ತಂಡಗಳ ನಡುವೆ ಇದುವರೆಗೆ 33 ಟೆಸ್ಟ್ ಪಂದ್ಯಗಳು ನಡೆದಿದ್ದು ಭಾರತ 10 ರಲ್ಲಿ ಗೆಲುವು ಸಾಧಿಸಿದ್ದು, 13 ರಲ್ಲಿ ಸೊಲು ಕಂಡಿದೆ. ಇನ್ನುಳಿದ 10 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

Leave a Reply

Your email address will not be published.

Social Media Auto Publish Powered By : XYZScripts.com