ದೀಪಕ್‌ ಕೊಲೆ ಪ್ರಕರಣ : ಅಂತ್ಯಕ್ರಿಯೆ ನಡೆಸಲು ಒಪ್ಪಿಗೆ : 5 ಲಕ್ಷ ರೂ ಪರಿಹಾರ ಘೋಷಣೆ

ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ದೀಪಕ್‌ ರಾವ್‌ ಅವರ ಅಂತ್ಯಕ್ರಿಯೆಗೆ ಪೋಷಕರು ಹಾಗೂ ಪ್ರತಿಭಟನಾಕಾರರು ಕೊನೆಗೂ ಒಪ್ಪಿಗೆ ನೀಡಿದ್ದಾರೆ.

ಮೃತದೇಹದ ಶವಯಾತ್ರೆ ನಡೆಸಲು ಅನುಮತಿ ನೀಡದ ಕಾರಣ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಹಾಗೂ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಥಳಕ್ಕೆ ಆಗಮಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಬಿಗಿ ಪಟ್ಟು ಹಿಡಿದಿದ್ದರು.

ಬಳಿಕ ಮಂಗಳೂರು ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ದೀಪಕ್‌ ಮನೆಗೆ ಭೇಟಿ ನೀಡಿ, ಪರಿಹಾರ ಧನವನ್ನು ಘೋಷಿಸಿ ಬಳಿಕ ಎಲ್ಲರ ಜೊತೆ ಮಾತುಕತೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಗ್ರಾಮದಲ್ಲೇ ಕೇವಲ ಮುಕ್ಕಾಲು ಕಿ.ಮೀ ಮೆರವಣಿಗೆ ನಡೆಸಿ ಬಳಿಕ ಅಂತ್ಯ ಸಂಸ್ಕಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ.

ಮತ್ತೊಂದೆಡೆ ಈ ಕುರಿತು ಮಾತನಾಡಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ, ದೀಪಕ್‌ ರಾವ್‌ ಮೃತದೇಹ ರವಾನೆ ವಿಚಾರವಾಗಿ ಪೊಲೀಸರು ಸೂಕ್ತ ತೀರ್ಮಾನ ಕೈಗೊಂಡಿದ್ದಾರೆ. ದೀಪಕ್‌ಯಾವ ಸಂಘಟನೆಗೆ ಸೇರಿದ್ದರು. ಅವರ ಸಾವಿಗೆ ಕಾರಣವೇನು ಎಂಬುದು ತನಿಖೆಯಿಂದ ಹೊರಬರಬೇಕಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com