ಬಳ್ಳಾರಿಯ ಪರಿವರ್ತನಾ ಯಾತ್ರೆಗೆ ಆರಂಭದಲ್ಲೇ ವಿಘ್ನ : ವೇದಿಕೆಯಲ್ಲಿ ಬೆಂಕಿ
ಬಳ್ಳಾರಿ : ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿಂದು ಪರಿವರ್ತನಾ ಯಾತ್ರೆ ಬಳ್ಳಾರಿ ತಲುಪಿದ್ದು, ಕಾರ್ಯಕ್ರಮದ ಆರಂಭದಲ್ಲೇ ವಿಘ್ನ ಎದುರಾಗಿದೆ. ಯಾತ್ರೆಯ ವೇದಿಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮುಖಂಡರು ಕಂಗಾಲಾಗ ಘಟನೆ ನಡೆದಿದೆ.
ಬಳ್ಳಾರಿಯ ಸಿರಗುಪ್ಪದ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಿಸಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ವೇದಿಕೆ ಮೇಲಿದ್ದ ಅನೇಕ ವಸ್ತುಗಳು ಸುಟ್ಟು ಹೋಗಿದ್ದು, ಅಲ್ಪ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.