PFI ಮಾತ್ರವಲ್ಲ ಕೋಮುಭಾವನೆ ಕೆರಳಿಸೋ ಎಲ್ಲಾ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ತೀವಿ : CM

ಚಿಕ್ಕಮಗಳೂರು : ಪಿಎಫ್‍ಐ ಮಾತ್ರವಲ್ಲ, ಕೋಮು ಭಾವನೆ ಕೆರಳಿಸುವಂತಹಾ ಎಲ್ಲಾ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಆ ಸಂಘಟನೆಗಳು ಪಿಎಫ್‍ಐ,
ಬಜರಂಗದಳ, ಶ್ರೀರಾಮಸೇನೆ ಯಾವುದೇ ಆಗಿರಬಹುದು ಎಲ್ಲದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಯಾರೂ ಸಾಯಬಾರದು, ಎಲ್ಲರ ಜೀವವೂ ಅಮೂಲ್ಯವಾದದ್ದು. ಸತ್ತವರ ಕುಟುಂಬದ ಬಗ್ಗೆ ನಮಗೆ ಸಿಂಪಥಿ ಇದೆ. ಅವರ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳು ಸಿಗಲಿದೆ ಎಂದಿದ್ದಾರೆ. ಆದರೆ  ಈ ಬಿಜೆಪಿಯವರು ಅಲ್ಲಿಗೆ ಹೋಗಿ ಗಲಾಟೆ ಮಾಡುತ್ತಿದ್ದಾರೆ. ಅವರಿಗೆ ಗಲಾಟೆ ಮಾಡಲು ಹೇಳಿದ್ದು ಯಾರು. ಅವರೇನೂ ಹಿಂದುತ್ವವನ್ನ ಗುತ್ತಿಗೆ ಪಡೆದಿದ್ದಾರಾ, ನಾವೆಲ್ಲಾ ಹಿಂದುಗಳಲ್ವಾ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಲಂಕುಶವಾಗಿ ಪರಿಶೀಲಿಸಿ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com