ಮೃತ ಬಶೀರ್ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಮೃತಪಟ್ಟ ಅಹ್ಮದ್ ಬಶೀರ್ ಕುಟುಂಬಕ್ಕೆ ಕರ್ನಾಟಕ ಸರ್ಕಾರ 10 ಲಕ್ಷ ರೂ ಪರಿಹಾರ ಘೋಷಿಸಿದೆ. ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ 7 ಜನ ದುಷ್ಕರ್ಮಿಗಳು ಬಶೀರ್ ಮೇಲೆ ಹಲ್ಲೆ ಮಾಡಿದ್ದರು. ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಕೊಲೆಗೆ ಪ್ರತಿಕ್ರಿಯೆ ರೂಪದಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು.

ದಾಳಿಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಬಶೀರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಂತಾಜನಕ ಪರಿಸ್ಥಿತಿಯಲ್ಲಿದ್ದ ಬಶೀರ್ ಅವರನ್ನು ಎ.ಜೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದರಾದರೂ ಚಿಕಿತ್ಸೆ ಫಲಕಾರಿಯಾಗದೇ ಬಶೀರ್ ಸಾವನ್ನಪ್ಪಿದ್ದರು.

Leave a Reply

Your email address will not be published.