ಕಲ್ಲಡ್ಕ ಶಾಲೆಗಿಲ್ಲದ ಕೊಲ್ಲೂರಿನ ಊಟ ‘ಕೈ’ ಸಮಾವೇಶಕ್ಕೆ : ಸರ್ಕಾರದ ವಿರುದ್ದ ಎಲ್ಲೆಡೆ ಆಕ್ರೋಶ

ಬೈಂದೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸಾಧನಾ ಸಮಾವೇಶಕ್ಕೆ ಕೊಲ್ಲೂರು ದೇವಸ್ಥಾನದ ಊಟವನ್ನು ಬಳಸಿಕೊಳ್ಳಲಾಗಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್‌ನ ಸಾಧನಾ ಸಮಾವೇಶಕ್ಕೆ 10 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಕೊಲ್ಲೂರು ದೇವಸ್ಥಾನದಲ್ಲಿ ಆಹಾರ ತಯಾರಿಸ ಕಾಂಗ್ರೆಸ್ ಕಾರ್ಯಕರ್ತರಿಗೆ ವಿತರಿಸಿರುವುದಾಗಿ ಆರೋಪಿಸಲಾಗಿದೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕಲ್ಲಡ್ಕ ಶಾಲೆಗೆ ಕೊಲ್ಲೂರು ದೇವಸ್ಥಾನದಿಂದ ನೀಡುತ್ತಿದ್ದ ಊಟವನ್ನು ನಿಲ್ಲಿಸಿತ್ತು. ಸರ್ಕಾರದ ಈ ಕ್ರಮಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈಗ ದೇವಸ್ಥಾನದ ಊಟವನ್ನು ಕಾಂಗ್ರೆಸ್‌ ಸಮಾವೇಶಕ್ಕೆ ಬಳಸಿಕೊಂಡಿದ್ದು, ಇದರಿಂದ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಎಲ್ಲೆಡೆ ಚರ್ಚೆ ನಡೆಯುತ್ತಿದೆ.

Leave a Reply

Your email address will not be published.