Cricket : ಸೈಯದ್ ಮುಷ್ತಾಕ್ ಅಲಿ ಟ್ರೋಫಿ : ಗೋವಾ ವಿರುದ್ಧ ಕರ್ನಾಟಕದ ಶುಭಾರಂಭ

2018 ರ ಸಾಲಿನ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕ ಗೆಲುವಿನ ಶುಭಾರಂಭ ಮಾಡಿದೆ. ವಿಶಾಖಪಟ್ಟಣಂ ನಲ್ಲಿ ನಡೆದ ಟಿ-20 ಪಂದ್ಯದಲ್ಲಿ ಗೋವಾ ವಿರುದ್ಧ ಕರ್ನಾಟಕ 49 ರನ್ ಜಯ ಗಳಿಸಿದೆ.

ಟಾಸ್ ಗೆದ್ದ ಗೋವಾ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲ ಬ್ಯಾಟ್ ಮಾಡಿದ ಕರ್ನಾಟಕ ನಿಗದಿತ 20 ಓವರುಗಳಲ್ಲಿ 4 ವಿಕೆಟ್ ಕಳೆದುಕೊಂಡು 172 ರನ್ ಕಲೆಹಾಕಿತು. ಕರ್ನಾಟಕದ ಪರವಾಗಿ ಮಯಂಕ್ ಅಗರವಾಲ್ 55, ಆರ್ ಸಮರ್ಥ್ 28, ಸ್ಟುವರ್ಟ್ ಬಿನ್ನಿ 28 ರನ್ ಗಳಿಸಿದರು.

ಗುರಿಯನ್ನು ಬೆನ್ನತ್ತಿದ ಗೋವಾ ತಂಡ 20 ಓವರುಗಳಲ್ಲಿ 8 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಕರ್ನಾಟಕ ಬೌಲರುಗಳಾದ ಅಭಿಮನ್ಯು ಮಿಥುನ್ ಹಾಗೂ ಶ್ರೀನಾಥ್ ಅರವಿಂದ್ ತಲಾ 2 ವಿಕೆಟ್ ಪಡೆದರು.

Leave a Reply

Your email address will not be published.

Social Media Auto Publish Powered By : XYZScripts.com