Cricket : ಧೋನಿ ದಾಖಲೆ ಮುರಿದ ಸಹಾ : ಇತಿಹಾಸ ಸೃಷ್ಟಿಸಿದ ವಿಕೆಟ್ ಕೀಪರ್..!

ದಕ್ಷಿಣ ಆಫ್ರಿಕಾ ಹಾಗೂ ಭಾರತ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಇತಿಹಾಸ ಸೃಷ್ಟಿಸಿದ್ದಾರೆ. ಟೆಸ್ಟ್ ಪಂದ್ಯವೊಂದರಲ್ಲಿ 10 ಬ್ಯಾಟ್ಸಮನ್ ಗಳನ್ನು ಔಟ್ ಮಾಡಿದ ಭಾರತದ ಮೊದಲ ವಿಕೆಟ್ ಕೀಪರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಅಂಗಳದಲ್ಲಿ ನಡೆದ ಮೊದಲ ಟೆಸ್ಟ್ ನ ಎರಡೂ ಇನ್ನಿಂಗ್ಸ್ ಗಳಲ್ಲಿ ವೃದ್ಧಿಮಾನ್ ಒಟ್ಟು 10 ಕ್ಯಾಚ್ ಪಡೆದಿದ್ದಾರೆ. ಈ ಮೂಲಕ ಇದುವರೆಗೆ ಧೋನಿ ಹೆಸರಿನಲ್ಲಿದ್ದ ದಾಖಲೆಯನ್ನು ಸಹಾ ಮುರಿದ್ದಾರೆ. ಈ ಹಿಂದೆ ಮಹೇಂದ್ರ ಸಿಂಗ್ ಧೋನಿ ಆಸ್ಟ್ರೇಲಿಯಾ ವಿರುದ್ಧ ಮೆಲ್ಬರ್ನ್ ನಲ್ಲಿ ಕ್ಯಾಚ್ ಹಾಗೂ ಸ್ಟಂಪಿಂಗ್ ಮಾಡುವ ಮೂಲಕ 9 ಜನರನ್ನು ಔಟ್ ಮಾಡಿದ್ದರು.

ಸೌತ್ ಆಫ್ರಿಕಾದ ಎಬಿ ಡಿವಿಲಿಯರ್ಸ್ ಹಾಗೂ ಇಂಗ್ಲೆಂಡಿನ ಜಾಕ್ ರಸೆಲ್ 11 ಕ್ಯಾಚ್ ಗಳೊಂದಿಗೆ ಮೊದಲ ಎರಡು ಸ್ಥಾನದಲ್ಲಿದ್ದಾರೆ. 10 ಕ್ಯಾಚ್ ಪಡೆದ ಇಂಗ್ಲೆಂಡಿನ ಬಾಬ್ ಟೇಲರ್ ಹಾಗೂ ಆಸ್ಟ್ರೇಲಿಯಾ ಆ್ಯಡಮ್ ಗಿಲ್ ಕ್ರಿಸ್ಟ್ ಅವರೊಂದಿಗೆ ಸಹಾ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com