ಮಹದಾಯಿಗಾಗಿ ಜನವರಿ 27ರಂದು ಮತ್ತೆ ಸ್ತಬ್ಧವಾಗಲಿದೆ ಕರ್ನಾಟಕ

ಬೆಂಗಳೂರು : ಮತ್ತೆ ಮಹದಾಯಿ ವಿವಾದ ಕಾವೇರುತ್ತಿದೆ. ಮಹದಾಯಿ ನದಿ ವಿವಾದ ಸಂಬಂಧ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಜನವರಿ 27ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ.

ಜನವರಿ 28ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕನ್ನಡಿಗರ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್‌ ನಾಗರಾಜ್‌, ಪ್ರಧಾನಿ ಮೋದಿ 28ರಂದು ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿದ್ದಾರೆ. ಈ ವೇಳೆ ದೊಡ್ಡ ಹೋರಾಟ ನಡೆಯಬೇಕು. ಕನ್ನಡಿಗರ ಶಕ್ತಿ ಪ್ರದರ್ಶನ ಮಾಡಬೇಕು. ಇದಕ್ಕಾಗಿ ಸರ್ಕಾರ ಸೇರಿದಂತೆ ಎಲ್ಲಾ ಕನ್ನಡಪರ ಸಂಘಟನೆಗಳೂ ಬಂದ್‌ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಿದ್ದಾರೆ.

ಬೆಳಗ್ಗೆ 6 ಗಂಟೆಯಂದ ಸಂಜೆ 6 ಗಂಟೆಯವರೆಗೆ ಬಂದ್‌ ಆಚರಣೆ ನಡೆಯಲಿದ್ದು, ಕರ್ನಾಟಕದ ಜನತೆ ಎಲ್ಲಾ ಮುನಿಸುವ ಮರೆತು ನೀರಿಗಾಗಿ ನಡೆವ ಹೋರಾಟಕ್ಕೆ ಸಾಥ್‌ ನೀಡುವಂತೆ ಮನವಿ ಮಾಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com