ಚಿಕ್ಕಮಗಳೂರು : BJP ಕಾರ್ಯಕರ್ತನಿಂದ ದಲಿತ ಮಹಿಳೆ ಮೇಲೆ ಅತ್ಯಾಚಾರ

ಚಿಕ್ಕಮಗಳೂರು : ಹೊಸ ವರ್ಷದ ದಿನ ದಲಿತ ಮಹಿಳೆ ಮೇಲೆ ಬಿಜೆಪಿ ಕಾರ್ಯಕರ್ತನೊಬ್ಬ ಅತ್ಯಾಚಾರವೆಸಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ವಿದ್ಯಾರಣ್ಯಪುರ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷ ನರೇಂದ್ರ ಹೆಗಡೆ ಎಂದು ಗುರುತಿಸಲಾಗಿದೆ.

ಈತ ಶೃಂಗೇರಿ ಕ್ಷೇತ್ರದ ಸಕ್ರಿಯ ಬಿಜೆಪಿ ಕಾರ್ಯಕರ್ತನಾಗಿದ್ದು, ಡಿಸೆಂಬರ್‌ 31ರಂದು ದಲಿತ ಮಹಿಳೆ ಮೇಲೆ ಅತ್ಯಾಚಾರ ವೆಸಗಿದ್ದಾಗಿ ಮಹಿಳೆ ದೂರು ನೀಡಿದ್ದಾರೆ. ಹೊಸ ವರ್ಷದ ಪಾರ್ಟಿ ಮುಗಿಸಿ ಬರುವಾಗ ಕುಡಿದ ಮತ್ತಿನಲ್ಲಿದ್ದ ಆತ ನನ್ನ ಮೇಲೆ ಅತ್ಯಾಚಾರವೆಸಗಿದ್ದಾಗಿ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಸದ್ಯ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನರೇಂದ್ರನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com