‘ ನಿಮ್ಮಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯ ನಮಗಿಲ್ಲ ‘ : ಯೋಗಿಗೆ CM ತಿರುಗೇಟು

ಕೊಡಗು : ಯೋಗಿ ಆದಿತ್ಯನಾಥ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿಮ್ಮಿಂದ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. ನಿಮ್ಮ ರಾಜ್ಯದಲ್ಲಿ ಎಷ್ಟು ಮಕ್ಕಳು ಸಾವನ್ನಪ್ಪಿದ್ದಾರೆ? ‘ ಎಂದು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಮನುಷ್ಯತ್ವ ಇಲ್ಲದ ಹಿಂದೂತ್ವ ಬಿಜೆಪಿಯಲ್ಲಿ ಮಾತ್ರ ಇದೆ. ಹಿಂದೂ‌ ಧರ್ಮದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಆಡಳಿತದಲ್ಲಿ ಮುಸಲ್ಮಾನರು, ಕ್ರಿಶ್ಚಿಯನ್ನರು, ದಲಿತರು ಇದ್ದಾರಾ?

ಕುಮಾರಸ್ವಾಮಿ ಮಾಡಿದ ತಪ್ಪಿನಿಂದ ಬಿಜೆಪಿಗೆ ರಾಜ್ಯದಲ್ಲಿ ಅಧಿಕಾರ ದೊರೆಯಿತು. ಕೊಟ್ಟ ಮಾತಿನಂತೆ ಕುಮಾರಸ್ವಾಮಿ ನಡೆದುಕೊಂಡಿದ್ದರೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ. ಸೈಕಲ್, ಸೀರೆ ಬಿಟ್ಟು ಬೇರೆ ಏನಾದರೂ ಕೊಟ್ಟಿದ್ದೀರಾ? ಅದೂ ಕೂಡ ಹರಕಲು ಸೀರೆ, ಮುರುಕಲು ಸೈಕಲ್ ‘ ಎಂದು ಮಡಿಕೇರಿಯಲ್ಲಿ ಸಿ.ಎಂ. ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

Leave a Reply

Your email address will not be published.