CM , ದಿನೇಶ್‌ ಗುಂಡೂರಾವ್‌ ಕ್ಷಮೆ ಕೇಳದಿದ್ದರೆ ಜೈಲ್‌ ಭರೋ ನಡೆಸ್ತೀವಿ : ಶೋಭಾ ಕರಂದ್ಲಾಜೆ

ಬೆಂಗಳೂರು : ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರನ್ನ ಉಗ್ರರು ಎಂದಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ಕ್ಷಮೆ ಕೇಳಬೇಕು. ಇಲ್ಲವಾದರೆ ಜೈಲ್‌ ಭರೋ ಚಳುವಳಿ ನಡೆಸುವುದಾಗಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಆರ್‌ಎಸ್‌ಎಸ್‌ ನವರನ್ನು ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ಉಗ್ರರಿಗೆ ಹೋಲಿಕೆ ಮಾಡಿದ್ದಾರೆ. ಈ ವಿಚಾರವಾಗಿ ಅವರು ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ನಾನು ಬಿಜೆಪಿ, ನಾನು ಆರ್‌ಎಸ್‌ಎಸ್‌ ಎಂಬ ಘೋಷಣೆಯೊಂದಿಗೆ ರಸ್ತೆಗಿಳಿದು ಪ್ರತಿಭಟನೆ ನಡೆಸಲಿದ್ದೇವೆ ಎಂದಿದ್ದಾರೆ. ಜೊತೆಗೆ ನಾವು ಉಗ್ರರು ಎಂದಾದರೆ ಸರ್ಕಾರ ನಮ್ಮನ್ನು ಬಂಧಿಸಲಿ ಎಂದು ಸವಾಲು ಹಾಕಿದ್ದಾರೆ.
ಪಿಎಫ್‌ಐಗೆ ಕಾಂಗ್ರೆಸ್‌ ಬೆಂಬಲಿಸುತ್ತಿದೆ. ಈ ಮೂಲಕ ಉಗ್ರರನ್ನು ಪೋಷಿಸುತ್ತಿರುವುದು ಕಾಂಗ್ರೆಸ್‌ನವರೇ ಹೊರತು ಬಿಜೆಪಿ ಅಲ್ಲ ಎಂದಿದ್ದಾರೆ.

Leave a Reply

Your email address will not be published.