ಕರ್ನಾಟಕ ಬಂದ್‌ ಜನವರಿ 27ಕ್ಕೆ ಅಲ್ಲ 25ಕ್ಕೆ : ವಾಟಾಳ್‌ ನಾಗರಾಜ್‌

ಬೆಂಗಳೂರು : ಮಹದಾಯಿ ನದಿ ನೀರು ಹಂಚಿಕೆ ವಿಚಾರ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ಜನವರಿ 27ರಂದು ಕರ್ನಾಟಕ ಬಂದ್ ಮಾಡುವ ಬದಲು 25ರಂದು ಬಂದ್ ಮಾಡುವುದಾಗಿ ಕನ್ನಡ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ.

ಜನವರಿ 28ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಆದ್ದರಿಂದ ಜನವರಿ 27ರಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದ್ದರು. ಆದರೆ ಈಗ ಆ ದಿನಾಂಕವನ್ನು 25ಕ್ಕೆ ನಿಗದಿಪಡಿಸಲಾಗಿದೆ.

ಮಹದಾಯಿ ನದಿ ವಿವಾದದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಸಮಸ್ಯೆ ಬಗೆಹರಿಸಲು ಪ್ರಧನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಅಲ್ಲದೆ 25ರ ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೆ ಕರ್ನಾಟಕ ಬಂದ್ ನಡೆಸಲಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಮನವಿ ಮಾಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com