ಸಂಕ್ರಾಂತಿಗೆ ಮಂಡ್ಯ ರೈತರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ : ನೀರು ಬಿಡುಗಡೆಗೆ ನಿರ್ಧಾರ

ಮಂಡ್ಯ : ಸಂಕ್ರಾಂತಿ ಹಬ್ಬಕ್ಕೆ ರಾಜ್ಯ ಸರ್ಕಾರ ಮಂಡ್ಯ ರೈತರಿಗೆ ಸಂತಸದ ಸುದ್ದಿ ನೀಡಿದೆ. ಜನವರಿ 13ರಿಂದ 10 ದಿನಗಳ ಕಾಲ ಕೆಆರ್‌ಎಸ್‌ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆ ನೀರು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಈ ಕುರಿತು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಗುರುವಾರ ಬೆಂಗಳೂರಿನಲ್ಲಿ ಈ ಕುರಿತು ಸಭೆ ನಡೆಸಿದ್ದು, ಸಭೆಯಲ್ಲಿ ಹಾಲಿ ಬೆಳೆಗೂ ಕಟ್ಟು ಪದ್ದತಿಯಲ್ಲಿ 4 ಬಾರಿ ನೀರು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಒಂದು ಕಟ್ಟಿನಲ್ಲಿ 18 ದಿನಗಳ ಕಾಲ ನೀರು ಬಿಡುಗಡೆ ಮಾಡುವುದಾಗಿ ನೀರಾವರಿ ಸಚಿವರು ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com