ರಾಜ್ಯದಲ್ಲಿ PFI ನ್ನು ಬ್ಯಾನ್‌ ಮಾಡುವ ಪ್ರಶ್ನೆಯೇ ಇಲ್ಲ : ಕಾಂಗ್ರೆಸ್‌ ನಾಯಕ ವೇಣುಗೋಪಾಲ್‌

ವಿಜಯಪುರ : ರಾಜ್ಯದಲ್ಲಿ ಬಿಜೆಪಿ, ಜನರಲ್ಲಿ ಕೋಮುಭಾವನೆ ಕೆರಳಿಸಿ, ಅಧಿಕಾರಕ್ಕೆ ಬರಲು ಹವಣಿಸುತ್ತಿದೆ.  ಮುಂಬರುವ ಚುನಾವಣೆಯಲ್ಲಿ ಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹೇಳಿದ್ದಾರೆ.

ವಿಜಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಕಾಂಗ್ರೆಸ್ ನಲ್ಲಿ ಯಾವುದೇ ಒಡಕಿಲ್ಲ, ಎಲ್ಲರೂ ಒಗ್ಗೂಡಿ ಚುನಾವಣೆ ಎದುರಿಸುತ್ತೇವೆ. ಆರ್.ಎಸ್.ಎಸ್. ಕೋಮುವಾದಿ ಸಂಘಟನೆ ಅನ್ನೋದರಲ್ಲಿ ಎರಡು ಮಾತಿಲ್ಲ. ಈ ಸಂಘಟನೆ ನಿಷೇಧ ಮಾಡುವುದು ರಾಜ್ಯ ಸರಕಾರಕ್ಕೆ ಬಿಟ್ಡಿದ್ದು.ಆದರೆ ರಾಜ್ಯದಲ್ಲಿ ಪಿಎಫ್ಐ ನಿಷೇಧಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿಯವರೇ ಅಪರಾಧ ಕೃತ್ಯಗಳಿಗೆ ಪ್ರಚೋದಿಸುತ್ತಿದ್ದಾರೆ. ಬಿಜೆಪಿ ಮೊದಲು ಕ್ರಿಮಿನಲ್‌ ರಾಜಕೀಯದಿಂದ ಹೊರಬರಲಿ ಎಂದಿದ್ದಾರೆ. ಪಕ್ಷದಲ್ಲಿ ಟಿಕೆಟ್ ಹಂಚಿಕೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲಾ ಆಕಾಂಕ್ಷಿಗಳು ಬದ್ದರಾಗಿರುವುದಾಗಿ ಹೇಳಿದ್ದಾರೆ.

ಎಲ್ಲಿ ಸಿಎಂ ಸಿದ್ದರಾಮಯ್ಯ ಕಾಲಿಡುತ್ತಾರೋ ಅಲ್ಲಿ ಹೆಣ ಬೀಳುತ್ತದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ವೇಣುಗೋಪಾಲ್‌, ಆ ಶೋಭಾ ಕರಂದ್ಲಾಜೆಗೆ ಮಾಡೋಕೆ ಕೆಲಸ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com