ಜಡ್ಜ್‌ಗಳ ಆರೋಪ ನಿಜವಿರಬಹುದು ಆದರೆ ಮಾಧ್ಯಮದ ಮುಂದೆ ಬಂದಿದ್ದು ತಪ್ಪು : ಸಂತೋಷ್‌ ಹೆಗ್ಡೆ

ಬೆಂಗಳೂರು : ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ನಡೆಸಿ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವುದಕ್ಕೆ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಬೇಸರ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿಗಳ ಆರೋಪ ನಿಜವಿರಬಹುದು. ಆದರೆ ಅವರು ಮಾಧ್ಯಮಗಳ ಮುಂದೆ ಬಂದಿದ್ದು ತಪ್ಪು. ಸಮಸ್ಯೆಗಳು ಎಲ್ಲೆಡೆ ಇವೆ. ಆದರೆ ಸ್ವಾತಂತ್ರ್ಯ ಬಂದಾಗಿನಿಂದಲೂ ಜನರಿಗೆ ನ್ಯಾಯಾಂಗದ ಮೇಲೆ ಸಾಕಷ್ಟು ನಂಬಿಕೆ ಇದೆ. ನ್ಯಾಯಾಲಯದ ಮಿತಿಯೊಳಗೆ ಸಮಸ್ಯೆ ಬಗೆಹರಿಸಿಕೊಳ್ಳಬೇಕಿತ್ತು. ನ್ಯಾಯಾಂಗ ವ್ಯವಸ್ಥೆ ಸಾರ್ವಜನಿಕ ಚರ್ಚೆಗೆ ಬಂದಿದ್ದು ನಿಜಕ್ಕೂ ಬೇಸರದ ಸಂಗತಿ ಎಂದಿದ್ದಾರೆ.

70 ವರ್ಷದಲ್ಲಿ ಸುಪ್ರೀಂಕೋರ್ಟ್‌ಗೆ ನ್ಯಾಯಾಂಗದ ವ್ಯವಸ್ಥೆ ಬಗ್ಗೆ ಕಾಳಜಿ ಇದೆ. ನ್ಯಾಯಾಧೀಶಱ ಬಗ್ಗೆಯೂ ಕಾಳಜಿ ಇದೆ. ಅಲ್ಲಿನ ಸಮಸ್ಯೆಗಳನ್ನು ಬಹಿರಂಗಗೊಳಿಸುವುದು ತಪ್ಪು ಎಂದಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com