ನ್ಯಾಯಾಂಗದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಲ್ಲ ಎಂದ ಕೇಂದ್ರ ಸರ್ಕಾರ

ದೆಹಲಿ : ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಸುಪ್ರೀ ಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳು ಮಾಧ್ಯಮಗಳ ಮುಂದೆ ಬಂದಿದ್ದು, ನ್ಯಾಯಮೂರ್ತಿಗಳ ನಡೆಯಿಂದಾಗಿ ಸರ್ಕಾರವೇ ತಲ್ಲಣಗೊಂಡಿದೆ.

ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ನಡೆಸಿದ ಕೆಲವೇ ನಿಮಿಷಗಳಲ್ಲಿ ಪ್ರಧಾನಿ ಮೋದಿ, ಕಾನೂನು ಸಚಿವ ರವಿ ಶಂಕರ್‌ ಪ್ರಸಾದ್‌ ಹಾಗೂ ರಾಜ್ಯ ಸಚಿವ ಪಿ.ಪಿ ಚೌಧರಿ ಅವರನ್ನು ಕರೆಸಿಕೊಂಡು ಮಾತುಕತೆ ನಡಸಿದ್ದಾರೆ.

ಸಭೆಯಲ್ಲಿ ಪ್ರಧಾನಿಗಳು ಅಗತ್ಯ ಮಾರ್ಗಸೂಚಿಗಳನ್ನು ನೀಡಬಹುದು ಎನ್ನಲಾಗಿದೆ. ನ್ಯಾಯಾಧೀಶರ ಸುದ್ದಿಗೋಷ್ಠಿ ಷೇರು ಮಾರುಕಟ್ಟೆ ಮೇಲೂ ಪ್ರಭಾವ ಬೀರಿದ್ದು, ವಾರಾಂತ್ಯದ ಆರಂಭದಲ್ಲಿ  ಏರಿಕೆ ಕಂಡಿದ್ದ ಷೇರು ಈಗ ಪಾತಾಳಕ್ಕಿಳಿದಿದೆ.

ಮತ್ತೊಂದೆಡೆ ನ್ಯಾಯಮೂರ್ತಿಗಳು ಮಾಡಿರುವ ಆರೋಪಗಳು ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಷಯವಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವ ಸಾಧ್ಯತೆ ಕಡಿಮೆ ಇದೆ ಎಂದು ಕೇಂದ್ರ ಕಾನೂನು ಸಚಿವಾಲಯದ ಮೂಲಗಳು ಹೇಳಿವೆ.

ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಚಾರದಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಲು ಬರುವುದಿಲ್ಲ. ಅಲ್ಲದೆ ಸುಪ್ರೀಂಕೋರ್ಟ್‌ ತನ್ನ ಸಮಸ್ಯೆಗಳನ್ನು ತಾನೇ ಬಗೆಹರಿಸಿಕೊಳ್ಳಬೇಕು ಎಂದಿದೆ.

 

 

Leave a Reply

Your email address will not be published.

Social Media Auto Publish Powered By : XYZScripts.com