ಪರಿವರ್ತನಾ ಯಾತ್ರೆಯಲ್ಲಿ ಟೋಕನ್‌ System : ಊಟ ಹಾಕಿ ಉಡುಗೊರೆ ಕೊಟ್ಟ ಕಾರ್ಯಕರ್ತರು

ಕೋಲಾರ : ನೆಲಕಚ್ಚಿರುವ ಕಾಂಗ್ರೆಸ್ ಪಕ್ಷವನ್ನು ದೇಶದ ಜನ ತಿರಸ್ಕರಿಸಿದ್ದಾರೆ. ಗುಜರಾತ್ ಮತ್ತು ಹಿಮಾಚಲಪ್ರದೇಶಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದೆ. ಕರ್ನಾಟಕದಲ್ಲಿ ನಾಲ್ಕು ಮುಕ್ಕಾಲು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಜನರು ನೋವು ಮತ್ತು ಅಪಮಾನ ಅನುಭವಿಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಕೋಲಾರದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

ಶ್ರೀನಿವಾಸಪುರದಲ್ಲಿ ಆರಂಭಗೊಂಡ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಜನರನ್ನು ವಂಚಿಸಿದೆ.  ಸಮೃದ್ಧ ಮತ್ತು ಸ್ವಾಭಿಮಾನಿ ಕರ್ನಾಟಕ ನಿರ್ಮಾಣಕ್ಕಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಕೋಲಾದರಲ್ಲಿ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಬಿಜೆಪಿ ಕಾರ್ಯಕರ್ತರು ಜನರನ್ನು ಕರೆತರಲು ಟೋಕನ್ ನೀಡಿ ಆಮಿಷವೊಡ್ಡಿದ ಘಟನೆ ನಡೆದಿದೆ. ಕಾರ್ಯಕ್ರಮದ ನಂತರ ಟೋಕನ್ ತೋರಿಸಿದವರಿಗೆ ಊಟ ಹಾಗೂ ಉಡುಗೊರೆಗಳನ್ನು ನೀಡಲಾಯಿತು. ಇತ್ತ ಪುರುಷ ಕಾರ್ಯಕರ್ತರು ಬಾರ್‌ನಲ್ಲಿ ಕಂಠಪೂರ್ತಿ ಕುಡಿದು ಕಾರ್ಯಕ್ರಮದ ಪರಿವೇ ಇಲ್ಲದೇ ತೂರಾಡುತ್ತಿದ್ದು ಕಂಡು ಬಂದಿತ್ತು.

 

Leave a Reply

Your email address will not be published.

Social Media Auto Publish Powered By : XYZScripts.com