ದಲಿತರೇ….ಅಂಬೇಡ್ಕರ್‌ಗೆ ಅವಮಾನ ಮಾಡಿದ ಕಾಂಗ್ರೆಸ್‌ಗೆ ಮತ ಹಾಕಬೇಡಿ : BSY

ಕೋಲಾರ : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಪಕ್ಷ ಭಾರತ ರತ್ನ ಪ್ರಶಸ್ತಿ ನೀಡದೆ ಅವಮಾನಿಸಿದೆ. ಆದ್ದರಿಂದ ದಲಿತರು ಕಾಂಗ್ರೆಸ್‌ಗೆ ಮತ ಹಾಕಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಕೋಲಾರದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಅಂಬೇಡ್ಕರ್‌ ಅವರಿಗೆ ಅವಮಾನವಾಗಿದೆ. ಅವರನ್ನು ಸಿದ್ದರಾಮಯ್ಯ ಸರ್ಕಾರ ಹೀನಾಯವಾಗಿ ನೋಡಿದೆ ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟು ಜನರು ಮೋಸ ಹೋಗಿದ್ದಾರೆ. ಮುಂದಿನ ಬಾರಿ ಅಂತಹ ತಪ್ಪು ಮಾಡಬೇಡಿ. ದಲಿತರೇ ಕಾಂಗ್ರೆಸ್‌ಗೆ ಮತ ಹಾಕಬೇಡಿ ಎಂದಿದ್ದಾರೆ.

ಸಿದ್ದರಾಮಯ್ಯ ಭ್ರಷ್ಟ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅವರನ್ನು ಹೇಳುವವರು ಕೇಳುವವರು ಯಾರೂ ಇಲ್ಲ. ತಾನೇ ಎಲ್ಲ ಎಂದುಕೊಂಡಿದ್ದಾರೆ. ಈ ಬಾರಿ ರಾಜ್ಯದ ಜನ ಅವರ ಸೊಕ್ಕಿಗೆ ಸರಿಯಾದ ಪಾಠ ಕಲಿಸುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com