ನೀರುತರಲು ಹೋದ ಬಾಲಕಿಯ ಹಿಂದೆ ಹೋದ್ರು, ಬಾಯಿಗೆ ಬಟ್ಟೆ ತುರುಕಿದ್ರು..ಆಮೇಲಾಗಿದ್ದೇ ಬೇರೆ

ವಿಜಯಪುರ : ಇತ್ತೀಚೆಗಷ್ಟೇ ಬಾಲಕಿ ದಾನಮ್ಮ ಮೇಲೆ ಅತ್ಯಾಚಾರ ಹಾಗೂ ಕೊಲೆ ನಡೆದ ಬೆನ್ನಲ್ಲೇ ಅದೇ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳ ಬಾಯಿಗೆ ಬಟ್ಟೆ ತುರುಕಿ, ಕಾಮುಕನೊಬ್ಬ ಅತ್ಯಾಚಾರ ನಡೆಸಿದ್ದಾನೆ.

ವಿಜಯಪುರದ ಇಂಡಿ ತಾಲ್ಲೂಕಿನ ಚಡಚಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 17 ವರ್ಷದ ಬಾಲಕಿ ತೋಟದ ಮನೆಯಲ್ಲಿದ್ದ ವೇಳೆ ಆಕೆಯ ಪರಿಚಯಸ್ಥನಾದ ಕಂಠಪ್ಪ ಕೋಣೆಗೋಳ (45) ಎಂಬಾತ ತನ್ನ ಮೂವರು ಸ್ನೇಹಿತರೊಂದಿಗೆ ಬಾಲಕಿ ಮನೆಗೆ ಬಂದು ನೀರು ಕೇಳಿದ್ದಾನೆ. ಬಾಲಕಿ ನೀರು ತರಲು ಒಳಗೆ ಹೋದ ವೇಳೆ ಒಳನುಗ್ಗಿ ಬಾಲಕಿ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿದ್ದಾನೆ.

ಅತ್ಯಾಚಾರವೆಸಗಿದ ಬಳಿಕ ಕಂಠಪ್ಪ ಹಾಗೂ ಆತನ ಸ್ನೇಹಿತರು ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ಚಡಚಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

 

Leave a Reply

Your email address will not be published.