ನಾಪತ್ತೆಯಾಗಿದ್ದ VHP ನಾಯಕ ಪ್ರವೀಣ್‌ ತೊಗಾಡಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ !

ಅಹಮದಾಬಾದ್‌ : ಸೋಮವಾರ ಮದ್ಯಾಹ್ನದಿಂದ ನಾಪತ್ತೆಯಾಗಿದ್ದ ವಿಶ್ವ ಹಿಂದೂ ಪರಿಷತ್‌ನ ಮುಖಂಡ ಪ್ರವೀಣ್ ಭಾಯ್ ತೊಗಾಡಿಯಾ ಅವರು ಅಹಮದಾಬಾದ್‌ನ ಸಸಿಭಾಗ್‌ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಅವರನ್ನು ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಬೆಳಗ್ಗೆಯಿಂದಲೇ ತೊಗಾಡಿಯ ಕಾಣೆಯಾಗಿದ್ದರು. ಅವರು ಎಲ್ಲಿದ್ದಾರೆ ಎಂಬ ಬಗ್ಗೆ ಯಾರಿಗೂ ಮಾಹಿತಿ ಇರಲಿಲ್ಲ ವಿಶ್ವ ಹಿಂದೂ ಪರಿಷತ್‌ ಹೇಳಿತ್ತು. ಅಲ್ಲದೆ ಪ್ರಕರಣ ಸಂಬಂಧ ಅವರನ್ನು ರಾಜಸ್ಥಾನ ಪೊಲೀಸರು ಬಂಧಿಸಿರುವುದಾಗಿಯೂ ಆರೋಪಿಸಿತ್ತು. ಆದರೆ ಈ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ತೊಗಾಡಿಯಾರನ್ನು ಬಂಧಿಸಿಲ್ಲ ಎಂದಿದ್ದರು. ಇದಾದ ಬಳಿಕ ಎಲ್ಲರಲ್ಲೂ ಆತಂಕ ಮನೆ ಮಾಡಿತ್ತು. ಜೊತೆಗೆ ಅವರನ್ನು ಹುಡುಕಲು ಪೊಲೀಸರ ನಾಲ್ಕು ತಡಗಳನ್ನು ರಚಿಸಲಾಗಿತ್ತು.

ಬಳಿಕ ಕಾರ್ಯಾಚರಣೆಗಿಳಿದ ಪೊಲೀಸರು ಹುಡುಕಾಟ ನಡೆಸುತ್ತಿದ್ದ ವೇಳೆ ತೊಗಾಡಿಯಾ ಸಸಿಭಾಗ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಲೋ ಬಿಪಿಯಂದಾಗಿ ಅವರು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಅಹಮದಾಬಾದ್‌ನ ಸೋಲಾ ಠಾಣೆಯ ಪೊಲೀಸರು ಹಳೆಯ ಪ್ರಕರಣ ಸಂಬಂಧ ತೊಗಾಡಿಯಾರನ್ನು ಬಂಧಿಸಲು ಪೊಲೀಸರ ತಂಡವೊಂದು ಬೆಳಗ್ಗೆ ತೊಗಾಡಿಯಾ ಅವರ ಮನೆಗೆ ಭೇಟಿ ನೀಡಿತ್ತು. ಆದರೆ ಅವರು ಮನೆಯಲ್ಲಿಲ್ಲದ ಕಾರಣ ವಾಪಸ್ಸಾಗಿರುವುದಾಗಿ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

 

 

 

Leave a Reply

Your email address will not be published.

Social Media Auto Publish Powered By : XYZScripts.com