ತಾಯಿ ಸಾವಿನಿಂದ ಮನನೊಂದು ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಮಗ

ಮೈಸೂರು : ತಾಯಿಯ ಸಾವಿನ ಸುದ್ದಿ ಕೇಳಿ ಮನನೊಂದ ಮಗ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತ ಯುವಕ ಸತೀಶ್‌ (29) ಎಂದು ತಿಳಿದುಬಂದಿದೆ.

ಮೈಸೂರಿನ ವಾಜಮಂಗಳದ ನಿವಾಸಿಯಾಗಿದ್ದ ಸತೀಶ್‌ ತಾಯಿ ರತ್ನಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ವಿಚಾರ ತಿಳಿದ ಸತೀಶ್‌ ಮನನೊಂದು 2 ಗಂಟೆಗಳ ಕಾಲ ವಿಡಿಯೋ ಮಾಡಿಟ್ಟು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

ರತ್ನಮ್ಮ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಬದುಕುಳಿಯುವುದು ಕಷ್ಟ ಎಂದು ವೈದ್ಯರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ತಾಯಿಯಿರದೆ ತಾನೂ ಬದುಕುವುದಿಲ್ಲ ಎಂದುಕೊಂಡು ಸತೀಶ್‌ ಮೊದಲೇ ವಿಡಿಯೊ ಮಾಡಿಟ್ಟು, ತಾಯಿಯಸಾವಿನ ಸುದ್ದಿ ಕೇಳುತ್ತಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೈಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com