ರಕ್ಷಣೆ ನೀಡೋ ಪೊಲೀಸರಿಗೇ ಇಲ್ಲ ರಕ್ಷಣೆ : ಗಾಂಜಾ ಮತ್ತಿನಲ್ಲಿ ಪೇದೆ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಬೆಂಗಳೂರು : ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸ್‌ ಪೇದೆಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗಾಯಾಳು ಪೇದೆಯನ್ನು ರಾಜೇಂದ್ರ ಎಂದು ಗುರುತಿಸಲಾಗಿದೆ.

ಪಾದರಾಯನಪುರದ 11ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಹೊಯ್ಸಳ ವಾಹನದಲ್ಲಿ ಬಂದ ಪೇದೆ ರಾಜೇಂದ್ರ ಅವರ ಮೇಲೆ ಗಾಂಜಾ ಮತ್ತಿನಲ್ಲಿದ್ದ ದುಷ್ಕರ್ಮಿಗಳು ಲಾಂಗು ಮಚ್ಚುಗಳಿಂದ ಹಲ್ಲೆಗೈದು ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ರಾಜೇಂದ್ರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿರುವುದಾಗಿ ಮೂಲಗಳಉ ತಿಳಿಸಿವೆ. ಜೆಜೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದುಷ್ಕರ್ಮಿಗಳ ಶೋಧಕಾರ್ಯಾಚರಣೆ ಚುರುಕಿನಿಂದ ಸಾಗಿದೆ.

Leave a Reply

Your email address will not be published.

Social Media Auto Publish Powered By : XYZScripts.com