ಪದ್ಮಾವತ್‌ ಬಿಡುಗಡೆಗೆ BJP ಆಡಳಿತವಿರೋ ಕೆಲ ರಾಜ್ಯಗಳಲ್ಲಿ ನಿಷೇಧ : ಸುಪ್ರೀಂನಲ್ಲಿ ವಿಚಾರಣೆ

 

ದೆಹಲಿ : ಬಿಜೆಪಿ ಆಡಳಿತವಿರುವ ರಾಜಸ್ಥಾನ, ಗುಜರಾತ್‌, ಮಧ್ಯಪ್ರದೇಶ, ಹರಿಯಾಣ ಈ ನಾಲ್ಕು ರಾಜ್ಯಗಳಲ್ಲಿ ಪದ್ಮಾವತ್ ಸಿನಿಮಾ ಬಿಡುಗಡೆಗೆ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಇದನ್ನು ಪ್ರಶ್ನಿಸಿ ನಿರ್ಮಾಪಕರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಮನವಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ಒಪ್ಪಿಗೆ ನೀಡಿದೆ.

ಸೆನ್ಸಾರ್‌ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್‌ ಪಡೆದ ಬಳಿಕವೂ ಚಿತ್ರ ಪ್ರದರ್ಶನಕ್ಕೆ ಅನೇಕ ರಾಜ್ಯಗಳು ಒಪ್ಪಿಗೆ ನೀಡಿಲ್ಲ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂಬ ಕಾರಣದಿಂದ ಸಿನಿಮಾಗೆ ನಿಷೇಧ ಹೇರಿವೆ.

ಆದರೆ ಸೆನ್ಸಾರ್‌ ಮಂಡಳಿಯ ಷರತ್ತುಗಳಿಗೆ ಒಪ್ಪಿದ ಬಳಿಕವೂ ಸಿನಿಮಾ ಬಿಡುಗಡೆಗೆ ಅವಕಾಶ ನೀಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಿನಿಮಾ ನಿರ್ಮಾಪಕರು ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಕೋರ್ಟ್‌ ಪ್ರಕರಣವನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಮನವಿ ಸಲ್ಲಿಸಿದ್ದರು. ನಿರ್ಮಾಪಕರ ಈ ಮನವಿಯನ್ನು ಕೋರ್ಟ್‌ ಪುರಸ್ಕರಿಸಿದ್ದು, ನ್ಯಾ.ದೀಪಕ್‌ ಮಿಶ್ರಾ, ನ್ಯಾ. ಎ.ಎಂ ಖಾನ್‌ ವಿಲ್ಕರ್‌ ಮತ್ತು ನ್ಯಾ.ಡಿ.ವೈ ಚಂದ್ರಚೂಡ್ ಅವರಿದ್ದ ಪೀಠ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

Leave a Reply

Your email address will not be published.

Social Media Auto Publish Powered By : XYZScripts.com