JDS ಗೆ ಭಾರೀ ಹೊಡೆತ : ರಾಜೀನಾಮೆ ನೀಡಿದ ಮತ್ತಿಬ್ಬರು ಶಾಸಕರು

ರಾಯಚೂರು : ರಾಜ್ಯದಲ್ಲಿ ಸರ್ಕಾ ರಚನೆಯ ಕನಸು ಕಾಣುತ್ತಿರುವ ಜೆಡಿಎಸ್‌ಗೆ ಭಾರೀ ಹೊಡೆತ ಬಿದ್ದಿದೆ. ಈಗಾಗಲೆ ಪಕ್ಷದ ವಿರುದ್ದ ಬಂಡೆದ್ದಿರುವ 6 ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಳಿ ಮತ್ತಿಬ್ಬರು ಶಾಸಕರು ರಾಜೀನಾಮೆಗೆ ನಿರ್ಧರಿಸಿದ್ದಾರೆ.

ರಾಯಚೂರು ನಗರ ಕ್ಷೇತ್ರದ ಶಾಸಕ ಡಾ. ಶಿವರಾಜ್‌ ಪಾಟಾಲ್ ನಾಳೆ ಸ್ಪೀಕರ್‌ರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ದೇವೇಗೌಡರು ಹಾಗೂ ಕುಮಾರಸ್ವಾಮಿ ಬಗ್ಗೆ ನನಗೆ ಗೌರವವಿದೆ. ಆದರೆ ಜೆಡಿಎಸ್ ಜಿಲ್ಲಾ ನಾಯಕರ ವರ್ತನೆಯಿಂದ ಬೇಸರಗೊಂಡಿರುವುದಾಗಿ ಹೇಳಿದ್ದಾರೆ.

ಮತ್ತೊಂದೆಡೆ ಲಿಂಗಸಗೂರು ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್‌ ಸಹ ಜೆಡಿಎಸ್‌ ತೊರೆದು ಬಿಜೆಪಿಗೆ ಸೇರಲು ಸಿದ್ಧತೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ. ಆದರೆ ಪಕ್ಷದಿಂದ ನಾವೇ ಅವರನ್ನು ಹೊರಗೆ ಕಳುಹಿಸುತ್ತಿರುವುದಾಗಿ ಜೆಡಿಎಸ್‌ ವಕ್ತಾರ ರಮೇಶ್‌ ಬಾಬು ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com