ಪದ್ಮಾವತ್ ಸಿನಿಮಾಗೆ ನಿಷೇಧ ಹೇರುವ ಹಕ್ಕು ಯಾರಿಗೂ ಇಲ್ಲ : ಸುಪ್ರೀಂಕೋರ್ಟ್‌

ದೆಹಲಿ : ಸಂಜಯ್‌ ಲೀಲಾ ಬನ್ಸಾಲಿ ಅವರ ನಿರ್ದೇಶಕನ ಪದ್ಮಾವತ್ ಸಿನಿಮಾಗೆ ನಾಲ್ಕು ರಾಜ್ಯಗಳು ನಿಷೇಧ ಹೇರಿದ್ದು, ಇದಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ.

ಪದ್ಮಾವತಿ ಸಿನಿಮಾ ಜನವರಿ 25ರಂದು ದೇಶಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಬಹಳಷ್ಟು ವಿವಾದಗಳಿಗೆ ಕಾರಣವಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತದ ನಾಲ್ಕು ರಾಜ್ಯಗಳಲ್ಲಿ ಸಿನಿಮಾ ಬಿಡುಗಡೆಗೆ ನಿಷೇಧ ಹೇರಲಾಗಿದ್ದು, ಇದನ್ನು ಪ್ರಶ್ನಿಸಿ ನಿರ್ಮಾಪಕರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಈ ಕುರಿತ ತ್ವರಿತ ವಿಚಾರಣೆ ನಡೆಸಿದ ನ್ಯಾಯಾಲಯ ಹೇಳಿಕೆ ನೀಡಿದ್ದು, ಚಿತ್ರ ಪ್ರದರ್ಶನಕ್ಕೆ ತಡೆಯುಂಟಾಗದಂತೆ ರಾಜ್ಯ ಸರ್ಕಾರ ಚಿತ್ರ ಮಂದಿರಗಳಿಗೆ ಹಾಗೂ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಯಾವುದೇ ರಾಜ್ಯಗಳೂ ಸಿನಿಮಾಕ್ಕೆ ನಿಷೇಧ ಹೇರಲು ಸಾಧ್ಯವಿಲ್ಲ. ಎಲ್ಲಾ ರಾಜ್ಯಗಳಲ್ಲೂ ಪದ್ಮಾವತ್‌ ಸಿನಿಮಾ ಬಿಡುಗಡೆಯಾಗುತ್ತದೆ. ಅದಕ್ಕೆ ಯಾರೂ ಅಡ್ಡಿಪಡಿಸಬಾರದು ಎಂದಿದೆ.

 

 

Leave a Reply

Your email address will not be published.

Social Media Auto Publish Powered By : XYZScripts.com