ಹಿರಿಯ ವಿದ್ಯಾರ್ಥಿನಿ ಕಿರಿಯ ವಿದ್ಯಾರ್ಥಿಗೆ ಚೂರಿ ಹಾಕಿದ್ಲು :ಆದ್ರೆ Arrest ಆದದ್ದು ಮಾತ್ರ ಪ್ರಿನ್ಸಿಪಲ್‌ !

ಲಖನೌ : ಶಾಲೆಯ ಹಿರಿಯ ವಿದ್ಯಾರ್ಥಿಯೊಬ್ಬ ಕಿರಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿಯಲ್ಲಿ ನಡೆದಿದೆ. ಮಂಗಳವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಲಖನೌದಲ್ಲಿರುವ ಬ್ರೈಟ್‌ ಲ್ಯಾಂಡ್ ಶಾಲೆಯಲ್ಲಿ ಬಾಲಕನ ಮೇಲೆ 1ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ 6ನೇ ತರಗತಿ ವಿದ್ಯಾರ್ಥಿನಿ ಚಾಕುವಿನಿಂದ ಹಲ್ಲೆ ನಡೆಸಿದ್ದಾಳೆ ಎಂದು ಪೊಲೀಸ್‌ ಮೂಲಗಳು ಹೇಳಿವೆ. ವಿಷಯವನ್ನು ಮುಚ್ಚಿಟ್ಟ ಹಿನ್ನೆಲೆಯಲ್ಲಿ ಶಾಲೆಯ ಪ್ರಿನ್ಸಿಪಲ್‌ರನ್ನು ನಿರ್ಲಕ್ಷ್ಯದ ಆರೋಪದ ಮೇಲೆ ಬಂಧಿಸಲಾಗಿದೆ.

ಬಾಲಕನಿಗೆ ಎದೆ ಹಾಗೂ ಹೊಟ್ಟೆಯ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವೈದ್ಯರು ಹೇಳಿದ್ದಾರೆ. ಮಂಗಳವಾರ ಗಟನೆ ನಡೆದಿದ್ದು, ಬುಧವಾರ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಈ ಆಧಾರದ ಮೇಲೆ ಪೊಲೀಸರಿಗೆ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಪ್ರಿನ್ಸಿಪಲ್‌ರನ್ನು ಬಂಧಿಸಲಾಗಿದೆ.

ಬ್ಲ್ಯೂವೇಲ್‌ ಗೇಮ್ ಹಿನ್ನೆಲೆಯಲ್ಲಿ ಆ ಬಾಲಕಿ ಚಾಕು ಹಾಕಿರುವ ಸಾಧ್ಯತೆ ಇರುವುದಾಗಿ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಇಂದು ಆಸ್ಪತ್ರೆಗೆ ತೆರಳಿ ಬಾಲಕನ ಆರೋಗ್ಯ ವಿಚಾರಿಸಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com