ಅನಂತ್‌ ಕುಮಾರ್‌ ಹೆಗಡೆ ವಿವಾದಾತ್ಮಕ ಹೇಳಿಕೆ : ಸ್ವಪಕ್ಷೀಯರಿಂದಲೇ ಸಂಸದರಿಗೆ ತರಾಟೆ !

ಬೆಂಗಳೂರು : ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗಿರುವ ಸಚಿವ ಅನಂತ್‌ ಕುಮಾರ್‌ ಹೆಗಡೆ ವಿರುದ್ದ ಯುವ ಮೋರ್ಚಾ ಉಪಾಧ್ಯಕ್ಷ ಭೀಮಾ ಶಂಕರ್‌ ಪಾಟೀಲ್‌  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಅವರಿಗೆ ದೂರು ನೀಡಿದ್ದಾರೆ.

ಅನಂತ್‌ ಕುಮಾರ್‌ ಹೆಗಡೆ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಕಡಿವಾಣ ಹಾಕಿ. ಇದರಿಂದ ಪಕ್ಷದ ಹೆಸರಿಗೆ ಡ್ಯಾಮೇಜ್‌ ಆಗುತ್ತಿದೆ. ಸಚಿವರು ಕುವೆಂಪು ಅವರಿಗೂ ಅವಮಾನ ಮಾಡಿದ್ದಾರೆ. ಮುಂದೆ ಕನ್ನಡ ಭಾಷೆ, ಸಾಹಿತಿಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡದಂತೆ ಸೂಚನೆ ನೀಡಿ. ಉತ್ತರ ಕನ್ನಡ ಜಿಲ್ಲೆಯ ಸಂಸದರಾಗಿರುವ ಅವರು, ಕನ್ನಡ ಸಾಹಿತಿಗಳ ಕುರಿತು ತೀರಾ ಲಘುವಾಗಿ ಮಾತನಾಡಿದ್ದಾರೆ. ಅವರು ಕನ್ನಡ ಸಾಹಿತ್ಯ ವಿರೋಧ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕುವೆಂಪು ದೊಡ್ಡ ಸಾಹಿತಿ. ಅವರ ವಿಶ್ವಮಾನವ ಸಂದೇಶಕ್ಕೇ ಅವಮಾನ ಮಾಡಿದ್ದಾರೆ. ಕನ್ನಡ ಸಾಹಿತ್ಯದ ಬಗ್ಗೆ ಕನಿಷ್ಠ ಕಾಳಜಿ ಇಲ್ಲ. ಇಂತಹವರನ್ನು ಮಣ್ಣಿನ ಮಗ ಎನ್ನಲು ಸಾಧ್ಯವಿಲ್ಲ. ಅಲ್ಲದೆ ಪಕ್ಷದ ಅನೇಕ ಮುಖಂಡರು ಹಿಂದುತ್ವದ ಪ್ರತಿಪಾದನೆ ಮಾಡುವ ಭರದಲ್ಲಿ ಅಂಬೇಡ್ಕರ್‌ ಅವರನ್ನೂ ಅವಮಾನಿಸಿದ್ದಾರೆ. ಇದರಿಂದ ಚುನಾವಣೆ ಸಂದರ್ಭದಲ್ಲಿ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com