ದೆಹಲಿ CM ಕೇಜ್ರಿವಾಲ್‌ಗೆ ಮುಖಭಂಗ : AAP ನ 20 ಶಾಸಕರು ಅನರ್ಹ..?

ದೆಹಲಿ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷಕ್ಕೆ ಬಾರೀ ಹಿನ್ನೆಡೆಯಾಗಿದ್ದು, ಆಪ್‌ ಪಕ್ಷದ 20 ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿಯವರಿಗೆ ಶಿಫಾರಸು ಮಾಡಿದೆ.

ಲಾಭದಾಯರಕ ಹುದ್ದೆ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಆಪ್‌ನ 20 ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿ ಕೋವಿಂದ್‌ ಅವರಿಗೆ ವರದಿ ಕಳುಹಿಸಿದೆ.

ಆಪ್‌ ಪಕ್ಷದ 21 ಶಾಸಕರನ್ನು ಅನರ್ಹಗೊಳಿಸುವಂತೆ 2016ರ ಜೂನ್‌ 9ರಂದು ಕಾಂಗ್ರೆಸ್‌ ಪಕ್ಷ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಆಯೋಗ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಈ ಹಿನ್ನೆಲೆಯಲ್ಲಿ ದೆಹಲಿಯ ಆಪ್‌ ಬಹುಮತ ಕಳೆದುಕೊಳ್ಳು ಭೀತಿ ಎದುರಿಸುತ್ತಿದ್ದು. 20 ಸ್ಥಾನಗಳಿಗೆ ಉಪ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published.