Kerala : ಮಾರಕಾಸ್ತ್ರಗಳಿಂದ ಕೊಚ್ಚಿ RSS ಕಾರ್ಯಕರ್ತನ ಹತ್ಯೆ, ನಾಲ್ವರ ಬಂಧನ

ಕೇರಳದ ಕಣ್ಣೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈಯಲಾಗಿದೆ. 26 ವರ್ಷದ ಶ್ಯಾಮ್ ಪ್ರಸಾದ್ ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

Image result for kannur rss murder shyamprasad

ಕಪ್ಪು ಬಣ್ಣದ ಕಾರಿನಲ್ಲಿ ಆಗಮಿಸಿದ ನಾಲ್ಕು ಜನ ಮುಸುಕುಧಾರಿ ದುಷ್ಕರ್ಮಿಗಳು ಶ್ಯಾಮ್ ಪ್ರಸಾದ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶ್ಯಾಮಪ್ರಸಾದ್ ಓಡಿಹೋಗಿ ಹತ್ತಿರದ ಮನೆಯೊಂದರಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ದುಷ್ಕರ್ಮಿಗಳು ಬೆನ್ನಟ್ಟಿ ಕೊಚ್ಚಿದ್ದಾರೆ. ಗಾಯಗೊಂಡ ಶ್ಯಾಮಪ್ರಸಾದ್ ನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾನೆ.

Image result for kannur rss murder shyamprasad

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಇವರು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಹಾಗೂ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಸದಸ್ಯರಾಗಿದ್ದಾರೆ. ಕೆಲದಿನಗಳ ಹಿಂದೆ ನಡೆದಿದ್ದ SDPI ಕಾರ್ಯಕರ್ತನ ಕೊಲೆಗೆ ಪ್ರತೀಕಾರವಾಗಿ ಈ ಹತ್ಯೆ ನಡೆಸಲಾಗಿದೆ ಎಂದು ಪೋಲೀಸರು ಶಂಕಿಸಿದ್ದಾರೆ.

Leave a Reply

Your email address will not be published.