ಅಂಧರ ವಿಶ್ವಕಪ್ Cricket : ಚಾಂಪಿಯನ್ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರ..!

ಶಾರ್ಜಾದಲ್ಲಿ ಶನಿವಾರ ನಡೆದ ಅಂಧರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ವಿಶ್ವಚಾಂಪಿಯನ್ ಆಗಿರುವ ಭಾರತ ತಂಡದ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಹಲವಾರು ಗಣ್ಯರು ಅಭಿನಂದಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಅಭಿನಂದಿಸಿರುವ ಪ್ರಧಾನಿ ಮೋದಿ ‘ ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದಿರುವ ನಮ್ಮ ತಂಡಕ್ಕೆ ಅಭಿನಂದನೆಗಳು. ಅವರು ದೇಶದ ಜನರ ಹೆಮ್ಮೆಗೆ ಕಾರಣವಾಗಿದ್ದಾರೆ. ತಮ್ಮ ಆಟದ ಮೂಲಕ ಪ್ರತಿಯೊಬ್ಬ ಭಾರತೀಯರಿಗೆ ಪ್ರೇರಣೆಯಾಗಿದ್ದಾರೆ ‘ ಎಂದು ಟ್ವೀಟ್ ಮಾಡಿದ್ದಾರೆ.

ಮೋದಿಯಷ್ಟೇ ಅಲ್ಲದೇ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಚಿನ್ ತೆಂಡೂಲ್ಕರ್, ಹರಭಜನ್ ಸಿಂಗ್, ವಿವಿಎಸ್ ಲಕ್ಷ್ಮಣ್, ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿರಾಜ್ ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.

 

Leave a Reply

Your email address will not be published.