ಸಿದ್ದರಾಮಯ್ಯ ಧರ್ಮ, ಜಾತಿಗಳನ್ನು ಒಡೆಯುವ ಕೆಲಸ ಮಾಡ್ತಿದಾರೆ : ಶೋಭಾ ಕರಂದ್ಲಾಜೆ

ಚಾಮರಾಜನಗರ : ‘ ಧರ್ಮ ಹಾಗೂ ಜಾತಿಗಳನ್ನು ಒಡೆಯುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಾರಂಭಿಸಿದ್ದಾರೆ ‘ ಎಂದು ಭಾರತೀಯ ಜನತಾ ಪಕ್ಷದ ಶೋಭಾ ಕಂರದ್ಲಾಜೆ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹನೂರು ಗ್ರಾಮದಲ್ಲಿ ನಡೆಯುತ್ತಿರುವ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ  ‘ ಕೇಂದ್ರದ ಅನುಧಾನವನ್ನು ರಾಜ್ಯ ಸರ್ಕಾರ ಸದ್ಬಳಕೆ ಮಾಡಿಕೊಳ್ಳುವಲ್ಲಿ ವಿಫಲವಾಗಿದೆ.  ಮುಂಬರುವ ವಿಧಾನಸಭಾ ಚುನಾವಣೆ ನಿರ್ಣಾಯಕ ಚುನಾವಣೆಯಾಗಿದೆ. ಅದಕ್ಕಾಗಿ ಬಿಜೆಪಿ ಪಕ್ಷವನ್ನು ಗೆಲ್ಲಿಸಿ ‘ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published.