ಕರಾವಳಿಯಲ್ಲಿ ಮತ್ತೊಂದು ಕೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ದುಷ್ಕರ್ಮಿಗಳು

ಮಂಗಳೂರು : ಕರಾವಳಿಯಲ್ಲಿ ಮತ್ತೊಂದು ಕೊಲೆ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಶಿವರಾಜ್‌ (45) ಎಂದು ಗುರುತಿಸಲಾಗಿದೆ.

ಸೋಮವಾರ ಮುಂಜಾನೆ ಪೆಣಂಬೂರು ಪೊಲೀಸ್‌ ಠಾಣಾ ವ್ಯಾಪ್ತಿಯ ತಣ್ಣೀರು ಬಾವಿಯಲ್ಲಿದ್ದ  ಶಿವರಾಜ್‌ ಮನೆಯೊಳಗೆ ನುಗ್ಗಿದ  ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವರಾಜ್‌, ಭರತೇಶ್ ಎಂಬ ರೌಡಿಯ ಸಹೋದರನಾಗಿದ್ದು, ಭರತೇಶ್‌ ಮೇಲಿನ ದ್ವೇಷ ತೀರಿಸಿಕೊಳ್ಳಲು ಆತನ ಸಹೋದರನ ಮೇಲೆ ಹಲ್ಲೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಶಿವರಾಜ್‌ ತನ್ನ ಮನೆಯಲ್ಲಿ ನಿದ್ದೆ ಮಾಡುತ್ತಿದ್ದ ವೇಳೆ, ಮುಂಜಾನೆ 4.30ರ ಸುಮಾರಿಗೆ ದುಷ್ಕರ್ಮಿಗಳ ತಂಡ ಈ ಕೃತ್ಯ ನಡೆಸಿದೆ. ಕೆಲ ದಿನಗಳ ಹಿಂದೆ ಶಿವರಾಜ್‌ ವ್ಯಕ್ತಿಯೊಬ್ಬನ ಜೊತೆ ಜಗಳವಾಡಿದ್ದು, ಆ ಘಟನೆ ಸಾವಿಗೆ ಕಾರಣವಿದ್ದರೂ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಶಿವರಾಜ್ ದೇಹವನ್ನು ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಸ್ಥಳಕ್ಕೆ ಹಿರಿಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published.