Cricket : ವಾಂಡರರ್ಸ್ ಅಂಗಳದಲ್ಲಿ 3ನೇ ಟೆಸ್ಟ್ : ಪುಟಿದೇಳುವುದೇ ಕೊಹ್ಲಿ ಪಡೆ..?

ಬುಧವಾರ ಜೋಹಾನೆಸಸ್ಬರ್ಗ್ ನಗರದ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡಗಳ ನಡುವೆ ಮೂರನೇ ಟೆಸ್ಟ್ ಆರಂಭಗೊಳ್ಳಲಿದೆ. 2-0 ರಿಂದ ಈಗಾಗಲೇ ಸರಣಿಯನ್ನು ಸೋತಿರುವ ಭಾರತ, ಕೊನೆಯ ಟೆಸ್ಟ್ ಗೆಲುವಿಗಾಗಿ ಹೋರಾಟ ನಡೆಸಲಿದೆ. ಆತಿಥೇಯ ದಕ್ಷಿಣ ಆಫ್ರಿಕಾ ತಂಡ 3ನೇ ಟೆಸ್ಟ್ ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ.

ವಾಂಡರರ್ಸ್ ಮೈದಾನದಲ್ಲಿ ಇದುವರೆಗೆ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡಗಳ ನಡುವೆ 4 ಟೆಸ್ಟ್ ಪಂದ್ಯಗಳು ನಡೆದಿದ್ದು, ಎಲ್ಲವೂ ಡ್ರಾನಲ್ಲಿ ಅಂತ್ಯಗೊಂಡಿವೆ. ಟೀಮ್ ಇಂಡಿಯಾದ ಪ್ಲೇಯಿಂಗ್ 11 ನಲ್ಲಿ ಯಾರಿಗೆ ಸ್ಥಾನ ಲಭಿಸಲಿದೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಕಳೆದೆರಡು ಪಂದ್ಯಗಳಲ್ಲಿ ಆಡಿ ವೈಫಲ್ಯ ಅನುಭವಿಸಿದ್ದ ರೋಹಿತ್ ಶರ್ಮಾ ಬದಲಿಗೆ ಅಜಿಂಕ್ಯ ರಹಾನೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಮೂರನೇ ಟೆಸ್ಟ್ ಆರಂಭಕ್ಕೂ ಮುನ್ನ ರಹಾನೆ, ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಿರುವುದು ಕಂಡುಬಂದಿದೆ.

 

Leave a Reply

Your email address will not be published.

Social Media Auto Publish Powered By : XYZScripts.com