ವೀರಶೈವ ಮಹಾಸಭಾ ಇಬ್ಭಾಗ : ಲಿಂಗಾಯಿತ ಮಹಾಸಭಾ ಉದಯ

ಬೆಂಗಳೂರು : ವೀರಶೈವ ಹಾಗೂ ಲಿಂಗಾಯಿತ ಸಮುದಾಯಗಳಿಗೆ ಪ್ರತ್ಯೇಕ ಸ್ಥಾನಮಾನ ನೀಡಬೇಕೆಂಬ ವಾದಕ್ಕೆ ಅಂತ್ಯ ಸಿಕ್ಕಂತಾಗಿದ್ದು, ಅಖಿಲ ಭಾರತ ಮಹಾಸಭಾಕ್ಕೆ ಬದಲಾಗಿ ಜಾಗತಿಕ ಮಟ್ಟದಲ್ಲಿ ಲಿಂಗಾಯಿತ ಮಹಾಸಭಾ ಅಸ್ತಿತ್ವಕ್ಕೆ ಬಂದಿದೆ. ಈ ಮೂಲಕ ವೀರಶೈವ-ಲಿಂಗಾಯಿತ ಸಮುದಾಯಗಳು ಇಬ್ಬಾಗವಾಗಿವೆ.
ಪ್ರತ್ಯೇಕ ಲಿಂಗಾಯಿತ ಮಹಾಸಭಾ ಅಸ್ತಿತ್ವಕ್ಕೆ ಬರುತ್ತಿದ್ದಂತೆ ವೀರಶೈವ ಮಹಾಸಭಾದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಸೇರಿದಂತೆ 400ಕ್ಕೂ ಹೆಚ್ಚು ಮಂದಿ ರಾಜೀನಾಮೆ ಸಲ್ಲಿಸಿದ್ದು, ಲಿಂಗಾಯಿತ ಮಹಾಸಭಾಗೆ ಸೇರಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ಲಿಂಗಾಯಿತ ಮುಖಂಡರು ಹಾಗೂ ಸ್ವಾಮೀಜಿಗಳ ಸಭೆಯಲ್ಲಿ ಜಾಗತಿಕ ಲಿಂಗಾಯಿತ ಮಹಾಸಭೆಯ ರಚನೆಗೆ ತೀರ್ಮಾನ ಕೈಗೊಂಡಿದ್ದು, ಬಸವರಾಜ ಹೊರಟ್ಟಿ ಇದರ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಇನ್ನು ಸಚಿವ ಎಂ.ಬಿ ಪಾಟೀಲ್‌ ಕಾರ್ಯಾಧ್ಯಕ್ಷರಾಗಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com