ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ರೌಡಿಗಳು

ದಾವಣಗೆರೆ : ಯುವಕನ ಮೇಲೆ ಚಾಕು ಹಾಕಿದ್ದ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ರೌಡಿಗಳು ಚಾಕುವಿನಿಂದ ಹಲ್ಲೆ ಮಾಡಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಫೈರಿಂಗ್‌ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ರೌಡಿಗಳನ್ನು ಬಂಧಿಸುವ ಸಲುವಾಗಿ ಪೊಲೀಸರು ತಂಡ ತೆರಳಿದ್ದು, ಈ ವೇಳೆ ರೌಡಿಗಳು ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ.

ಗಾಯಾಳು ರೌಡಿಗಳನ್ನು ಸುನಿಲ್ ಹಾಗೂ ಸತೀಶ್‌ ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.

 

Leave a Reply

Your email address will not be published.

Social Media Auto Publish Powered By : XYZScripts.com