ಅತ್ಯಾಚಾರಿಗೆ ಗಲ್ಲು ಶಿಕ್ಷೆ : ಮಾಧ್ಯಮಗಳು, ವಕೀಲರ ಮೇಲೆ ಕಲ್ಲು ತೂರಾಟ ನಡೆಸಿದ ಅಪರಾಧಿ

ರಾಮನಗರ : 9 ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಗೆ ರಾಮನಗರ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಗಲ್ಲು ಶಿಕ್ಷೆ ತೀರ್ಪು ಪ್ರಕಟಿಸಿದ್ದು, ಅತ್ಯಾಚಾರ ಹಾಗೂ ಕೊಲೆ ಆರೋಪಿ ಸಲೀಂ ಎಂಬಾತನಿಗೆ ರಾಮನಗರ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಗೋಪಾಲ ಕೃಷ್ಣ ರೈ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
 2012ರ ಆಗಸ್ಟ್‌ನಲ್ಲಿ ಆರೋಪಿ ಸಲೀಂ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಆಕೆಯನ್ನು ಹತ್ಯೆ ಮಾಡಿದ್ದ. ಈ ಪ್ರಕರಣ ಸಂಬಂಧ 23ಕ್ಕೂ ಹೆಚ್ಚು ಸಾಕ್ಷಿಗಳು ಸಲೀಂ ವಿರುದ್ದ ಸಾಕ್ಷಿ ಹೇಳಿದ್ದರು. ಅಲ್ಲದೇ ವಿಧಿ ವಿಜಾನ ಪ್ರಯೋಗಾಲದ ವರದಿ ಸಹ ಇದನ್ನೇ ಹೇಳಿತ್ತು.
 ಈ ಕುರಿತು ಇಂದು ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಅತ್ಯಾಚಾರ ನಡೆಸಿದ್ದಕ್ಕಾಗಿ 10 ವರ್ಷ ಜೈಲು ಹಾಗೂ 50 ಸಾವಿರ ದಂಡ. ಕೊಲೆ ಮಾಡಿದ್ದಕ್ಕಾಗಿ ಗಲ್ಲು ಶಿಕ್ಷೆ ಜಾರಿ ಮಾಡಿದ್ದಾರೆ.
ತೀರ್ಪು ಬಂದ ನಂತರ ನ್ಯಾಯಾಲಯದಿಂದ ಹೊರಬರುವ ವೇಳೆ ಆಕ್ರೋಶಗೊಂಡ ಸಲೀಂ ಮಾಧ್ಯಮ ಸಿಬ್ಬಂದಿ ಹಾಗೂ ವಕೀಲರ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published.

Social Media Auto Publish Powered By : XYZScripts.com