ದೇಹದಲ್ಲಿ ರಕ್ತದ ಕೊನೆ ಹನಿ ಇರುವವರೆಗೆ ನೀರಿಗಾಗಿ ಹೋರಾಡುತ್ತೇನೆ : ವಾಟಾಳ್‌ ನಾಗರಾಜ್‌

ಬೆಂಗಳೂರು : ಮಹದಾಯಿ ನದಿ ನೀರಿಗಾಗಿ ಕರೆ ನೀಡಿದ್ದ ಕರ್ನಾಟಕ ಬಂದ್‌ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿಂದು ಬಂದ್‌ ಯಶಸ್ವಿಯಾದುದರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್‌ ನಾಗರಾಜ್‌, ರಾಜ್ಯದೆಲ್ಲೆಡೆ ಬಂದ್‌ ಯಶಸ್ವಿಯಾಗಿದೆ. ನಮ್ಮ ಹೋರಾಟಕ್ಕೆ ಉತ್ತಮ ಬೆಂಬಲ ದೊರೆತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಧನ್ಯವಾದ ತಿಳಿಸುವುದಾಗಿ ಹೇಳಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ವಿಚಾರವಾಗಿ ಮಧ್ಯಸ್ಥಿಕೆ ವಹಿಸಬೇಕು. ಮುಂದಿನ ದಿನಗಳಲ್ಲಿ ದೆಹಲಿಯ ಸಂಸತ್‌ ಭವನದ ಎದುರು ಹೋರಾಟ ನಡೆಸುತ್ತೇವೆ. ಮಹದಾಯಿಗಾಗಿ ನನ್ನ ರಕ್ತದ ಕೊನೆಯ ಹನಿ ಇರುವವರೆಗೂ ಹೋರಾಟ ಮಾಡುವುದಾಗಿ ಹೇಳಿದ್ದಾರೆ.

Leave a Reply

Your email address will not be published.

Social Media Auto Publish Powered By : XYZScripts.com