45 ಮಂದಿ ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಿದ ರಾಮಲಿಂಗಾರೆಡ್ಡಿ

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಸಮಾರಂಭ ನಗರದ ಬಿ.ಆರ್‌ ಅಂಬೇಡ್ಕರ್‌ ಭವನದಲ್ಲಿ ಬುಧವಾರ ನೆರವೇರಿತು. ಮಾಧ್ಯಮ ಕ್ಷೇತ್ರದಲ್ಲಿ ಮಾಡಲಾದ ಸಾಧನೆಗಾಗಿ ಸುಮಾರು 45 ಮಂದಿ ಪತ್ರಕರ್ತರಿಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ವಾರ್ಷಿಕ ಪ್ರಶಸ್ತಿ ಪ್ರಧಾನ ಮಾಡಿದರು.

ಇದೇ ಸಂದರ್ಭದಲ್ಲಿ ತಳ ಸಮುದಾಯದ ಬಗೆಗಿನ ಬರಹಗಳ ಅಂಕಣಕಾರರಿಗೆ ನೀಡುವ ಪ್ರಶಸ್ತಿ ವಿಭಾಗದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರಿಗೆ ಡಾ. ಬಿ.ಆರ್‌ ಅಂಬೇಡ್ಕರ್‌ ಮೂಕನಾಯಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ. ಸಿದ್ದರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್‌ ಹರ್ಷ, ಅಕಾಡೆಮಿ ಕಾರ್ಯದರ್ಶಿ ಎಸ್. ಶಂಕರಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published.

Social Media Auto Publish Powered By : XYZScripts.com