ಕಳಸಾ-ಬಂಡೂರಿ ಹೋರಾಟ : ಕರ್ನಾಟಕ ಬಂದ್, ನರಗುಂದ ಸಂಪೂರ್ಣ ಸ್ಥಬ್ದ

ಗದಗ : ಕಳಸಾ-ಬಂಡೂರಿ ಯೋಜನೆಗಾಗಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನರಗುಂದ ಪಟ್ಟಣ ಸಂಪೂರ್ಣ ಸ್ಥಬ್ದಗೊಂಡಿದೆ. ಮಹದಾಯಿ, ಕಳಸಾ-ಬಂಡೂರಿ ಹೋರಾಟದ ಕೇಂದ್ರ ಸ್ಥಾನ ನರಗುಂದದಲ್ಲಿ ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ.

ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರ ಪರದಾಡುವಂತಾಗಿದೆ. ಗದಗ ಜಿಲ್ಲೆಯ ಎಲ್ಲಾ  ಕಾಲೇಜುಗಳಿಗೆ ಡಿಸಿ ಮನೋಜ್ ಜೈನ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ನರಗುಂದ ಪಟ್ಟಣದಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಬಂದ್ ಮಾಡಲಾಗಿದ್ದು, ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ನರಗುಂದ ಪಟ್ಟಣ ಸಂಪೂರ್ಣ ಸ್ಥಬ್ದಗೊಂಡಿದ್ದು ಅಂಗಡಿ ಮುಗ್ಗಟ್ಟುಗಳು, ಪೆಟ್ರೋಲ್ ಬಂಕ್, ತರಕಾರಿ ಮಾರ್ಕೆಟ್‌ ಬಂದ್ ಆಗಿವೆ. ಬಸ್ ಸಂಚಾರ ಬಂದ್ ಆದ ಪರಿಣಾಮ ಪ್ರಯಾಣಿಕರ ಪರದಾಡುವಂತಾಗಿದೆ.

ನರಗುಂದ ಪಟ್ಟಣದಲ್ಲಿ ಗೋವಾ ಕಾರ್ ಗೆ ಹೋರಟಗಾರರಿಂದ ಕಲ್ಲು ತೂರಾಟ ನಡೆಸಲಾಗಿದೆ. ಗೋವಾ ಪಾಸಿಂಗ್ ಕಾರ್ ನೋಡಿ ಆಕ್ರೋಶಗೊಂಡ ಪ್ರತಿಭಟನಾಕಾರರಿಂದ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾಕಾರರ ಕಲ್ಲು ತೂರಾಟಕ್ಕೆ ಕಕ್ಕಾಬಿಕ್ಕಿಯಾಗಿ ರಿವರ್ಸ್ ಕಾರ ಓಡಿಸಿಕೊಂಡು ಹೋಗಿದ್ದಾನೆ.

 

Leave a Reply

Your email address will not be published.

Social Media Auto Publish Powered By : XYZScripts.com